

ಶ್ರೀನಿವಾಸಪುರ: ಪರೋಪಕಾರಕ್ಕೆ ಹೆಸರಾದ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಜಯರಾಂ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರು ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುವುದರ ಮೂಲಕ ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೌರ ಕಾರ್ಮಿಕರು, ಕಚೇರಿ ಸಿಬ್ಬಂದಿ, ನಿವೃತ್ತರಾದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರ ಕಾರ್ಮಿಕರ ಕ್ರೀಡಾ ಕೂಟದಲ್ಲಿ ವಿಜೇತರಾಗಿದ್ದ ಪೌರ ಕಾರ್ಮಿಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಕಂದಾಯ ನಿರೀಕ್ಷಕರಾದ ಫಾತಿಮಾ ಬೇಗಂ, ವಿ.ನಾಗರಾಜ್, ಶಂಕರ್, ಎಂಜಿಯರ್‍ಗಳಾದ ರೂಪಾ, ವೇದಾಂತ್, ಸಿಬ್ಬಂದಿ ಸುರೇಶ್, ಸಂತೋಷ್, ಪ್ರತಾಪ್, ಗೌತಮ್, ಸದಸ್ಯರಾದ ಬಿ.ವೆಂಕಟರೆಡ್ಡಿ, ಉನಿಕಿಲಿ ನಾಗರಾಜ್, ಮುನಿರಾಜು, ಶ್ರೀನಿವಾಸ್, ನಲ್ಲಪ್ಪಲ್ಲಿ ರೆಡ್ಡಪ್ಪ, ಷಫಿವುಲ್ಲಾ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಆಂಜನಪ್ಪ, ಮುಖಂಡರಾದ ಬಾಲಕೃಷ್ಣ, ರಾಮಚಂದ್ರ, ಸತೀಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಿ.ಎನ್.ಕುಬೇರಗೌಡ ಇದ್ದರು.
ಮೆರವಣಿಗೆ: ಪೌರ ಕಾರ್ಮಿಕರು ಹಾಗೂ ಕಚೇರಿ ಸಿಬ್ಬಂದಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಿದರು.
