ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಸೆಪ್ಟೆಂಬರ್ 17ನೇ ತಾರೀಖಿನಿಂದ ಅಕ್ಟೋಬರ್ 2ರ ಗಾಂಧಿ ಜಯಂತಿವರೆಗೂ ಇಡೀ ರಾಷ್ರವ್ಯಾಪ್ತಿಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಗಿದೆ ಎಂದು ಯಲ್ದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ.ಶ್ರೀನಿವಾಸರೆಡ್ಡಿ ತಿಳಿಸಿದರು.
ಯಲ್ದೂರು ಬಸ್ಸುನಿಲ್ದಾಣದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶ. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘ ಸಂಸ್ಥೆಗಳ ಸದಸ್ಯರು , ಶಾಲಾ ಮಕ್ಕಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಜನವಸತಿ ಪ್ರದೇಶಗಳಾದ ಶಾಲೆ, ಆಸ್ಪತ್ರೆ, ಬಸ್ಸುನಿಲ್ದಾಣ, ಸಂತೆ, ದೇವಸ್ಥಾನ, ನೀರಿನ ಶುದ್ದೀಕರಣ ಘಟಕಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕೆಂದು ತಿಳಿಸಿದರು. ಗ್ರಾಪಂ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಇದ್ದರು.