ಶಿಕ್ಷಣ ಇಲಾಖೆ 37,587 ಕೋಟಿ
ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ
ನಗರಾಭಿವೃದ್ಧಿ ಇಲಾಖೆ & ನೀರಾವರಿ ಇಲಾಖೆ 19,044 ಕೋಟಿ
ಲೋಕೋಪಯೋಗಿ ಇಲಾಖೆ 10,143 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,166 ಕೋಟಿ
ಇಂಧನ ಇಲಾಖೆ 22,773 ಕೋಟಿ
ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ
ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,038 ಕೋಟಿ
ನೀರಾವರಿ ಯೋಜನೆಗೆ
770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
ಕೆ.ಸಿ ವ್ಯಾಲಿ ಮತ್ತು ಹೆಚ್.ಎನ್.ವ್ಯಾಲಿ ಯೋಜನೆಗಳ ಎರಡನೇ ಹಂತದಲ್ಲಿ 529 3 ಕೋಟಿ ರೂ. ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 296 ಕರೆ ತು೦ಬಿಸುವ ಯೋಜನೆ ಅನುಷ್ಠಾನ.
ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಕ್ರಮ.
ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ.
ಸಹಕಾರ ಮತ್ತು ರೇಷ್ಮೆ
ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷ ರೂ. ಗಳಿಗೆ ಹೆಚ್ಚಳ.
ಶೇ.3 ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಳ,
30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ.
ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ,
ರೇಷ್ಮೆ ನೂಲು ಬಿಚ್ಚಾಣಿಕದಾರರಿಗೆ 5 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.
ಕೃಷಿ ಮತ್ತು ತೋಟಗಾರಿಕೆ ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿ
ನವೋದ್ಯಮ ಹೊಸ ಯೋಜನೆಯಡಿ ಕೃಷಿ ಉದ್ಯಮಗಳಿಗೆ ನಾವೀನ್ಯತೆಯನ್ನು ಪ್ರೋತ್ಸಾಹಿಸಲು 10 ಕೋಟಿ ರೂ. ನೆರವು
ಕೃಷಿ ಯಾಂತ್ರೀಕರಣಕ್ಕೆ ಪ್ರೋತ್ಸಾಹ: ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಹೈಟೆಕ್ ಹಾರ್ವೆಸ್ಟ ಹಬ್ ಸ್ಥಾಪನೆಗೆ 50 ಕೋಟಿ ರೂ. ಅನುದಾನ. FPO ಗಳಿಗೆ ಪ್ರೋತ್ಸಾಹ
GI TAG ಹೊಂದಿರುವ ಕಾಫಿ, ಮೈಸೂರು ಮಲ್ಲಿಗೆ, ನಂಜನಗೂದು ರಸಬಾಳೆ, ಮೈಸೂರು ವೀಳೆದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಮಾಡಲು ಕ್ರಮ
ಮೀನುಗಾರಿಕೆ ಮತ್ತು ಪಶು ಸಂಗೋಪನೆ
ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 3 ಲಕ್ಷ ರೂ. ಗಳಿಗೆ ಹೆಚ್ಚಳ,
ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.
ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್ಗಳನ್ನು ಪೆಟ್ರೋಲ್/ಡೀಸಲ್ ಇಂಜಿನ್ಗಳಾಗಿ ಬದಲಾಯಿಸಲು ತಲಾ
50,000 ರೂ. ಸಹಾಯಧನ: ಐದು ಕೋಟಿ ರೂ. ನೆರವು.
ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ.
ನಂದಿನಿ ಹೈನು ಉತ್ಪನ್ನಗಳ ಬ್ರಾಂಡನ್ನು ಇನ್ನಷ್ಟು ವಿಸ್ತರಿಸಿ, ಬೆಳೆಸಲು ಸರ್ಕಾರದ ಆದ್ಯತೆ.
ಅನ್ನಭಾಗ್ಯ ಯೋಜನೆ ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
ಅರ್ಹ ಫಲಾನುಭವಿಗಳಿಗೆ 5 ಕೆ.ಜಿ. ಹೆಚ್ಚುವರಿ ಆಹಾರಧಾನ್ಯ ವಿತರಣೆ
ಆಹಾರಧಾನ್ಯ ಲಭ್ಯವಾಗುವವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
ಅಂದಾಜು 442 ಕೋಟಿ ಫಲಾನುಭವಿಗಳಿಗೆ ಅನುಕೂಲ: ಈ ಯೋಜನೆಗೆ 10,275 ಕೋಟಿ ರೂ. ಅನುದಾನ
ಗೃಹ ಲಕ್ಷ್ಮಿ ಯೋಜನೆಗೆ
ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ನೆರವು ನೇರ ವರ್ಗಾವಣೆ
ಈ ಯೋಜನೆಗೆ ವಾರ್ಷಿಕ ಅಂದಾಜು 30,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ
ಬೆಲೆ ಏರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ನೆಮ್ಮದಿ
ಸುಮಾರು 130 ಕೋಟಿ ಮಹಿಳೆಯರಿಗೆ ಈ ಯೋಜನೆಯಿಂದ ಲಾಭ
ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ
ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.
ಈ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿದ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.
1ರಿಂದ 10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ: 60 ಲಕ್ಷ ಮಕ್ಕಳಿಗೆ ಅನುಕೂಲ 280 ಕೋಟಿ ರೂ. ಅನುದಾನ.
ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 850 ಕೋಟಿ ರೂ. ಅನುದಾನ,
ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ. ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ಉನ್ನತೀಕರಣಕ್ಕೆ ಕ್ರಮ.
ಯುವನಿಧಿ ಯೋಜನೆಯಡಿ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ
2023 ರಲ್ಲಿ ಪದವಿ ಪಡೆದು 6 ತಿಂಗಳವರೆಗೂ ಉದ್ಯೋಗ ಲಭಿಸದ ಯುವಜನರಿಗೆ 2 ವರ್ಷದವರೆಗೆ ಅಥವಾ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ
ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ
ಡಿಪ್ಲೋಮೋ ಹೊಂದಿರುವವರಿಗೆ ಪ್ರತಿ ತಿಂಗಳು 1500 ರೂಪಾಯಿ
ನಾಡಿನ ಯುವ ಜನತೆಗೆ ಆರ್ಥಿಕ ನೆರವು ನೀಡಿ ಆತ್ಮವಿಶ್ವಾಸ ತುಂಬಿ ಬದುಕಿನಲ್ಲಿ ನೆಲೆ ಕಂಡುಕೊಳ್ಳಲು ಸಹಾಯ
ಸುಮಾರು 3.1 ಲಕ್ಷ ಯುವಜನರಿಗೆ ಈ ಯೋಜನೆಯಿಂದ ಲಾಭ
ಗೃಹ ಜ್ಯೋತಿ ಯೋಜನೆ
ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ. 10 ರಷ್ಟು ಹೆಚ್ಚುವರಿ ಯೂನಿಟ್ ವಿದ್ಯುತ್ ಉಚಿತ 200 ಯೂನಿಟ್ ವರೆಗೆ
ವಾರ್ಷಿಕ ಅ೦ದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ (ಪ್ರತಿ ಕುಟುಂಬಕ್ಕೆ ಪ್ರತಿಯೊಬ್ಬ ವ್ಯಕ್ತಿಗೆ ಇಂಧನ ಖಾತರಿ ನೀಡುವ ಯೋಜನೆ.
ಬೆಂಗಳೂರು ಅಭಿವೃದ್ಧಿಗೆ
ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಬ್ರಾಂಡ್ ಬೆಂಗಳೂರು ಪರಿಕಲ್ಪನೆ ಜಾರಿ.
ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ.
ಸಾರ್ವಜನಿಕರ ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ ಆಡಳಿತ.
ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಕ್ರಮ.