ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಕೋಲಾರ:- ಕೋಲಾರ ಜಿಲ್ಲಾ ಮಾಜಿ ಯೋಧರ ಟ್ರಸ್ಟ್‍ವತಿಯಿಂದ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬಲಮಂದೆ ಗ್ರಾಮದಲ್ಲಿ ಮಾಜಿ ಯೋಧರ ಮಕ್ಕಳಿಗಾಗಿ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ತೆರೆಯಲಾಗುತ್ತಿದ್ದು, ಫೆ.3 ರಂದು ವಿದ್ಯುಕ್ತವಾಗಿ ಉದ್ಘಾಟನೆಯಾಗಲಿದೆಯೆಂದು ಟ್ರಸ್ಟಿನ ಅಧ್ಯಕ್ಷ ಎಚ್.ಜಗನ್ನಾಥನ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಲಮಂದೆ ಗ್ರಾಮದಲ್ಲಿರುವ ಅಗತ್ಯಮೂಲ ಸೌಕರ್ಯಗಳನ್ನು ಬಳಸಿಕೊಂಡು ಬೆಂಗಳೂರಿನ ಸಿ ಫಾರ್ ಸೊಸೈಟಿವತಿಯಿಂದ ನೀಡಿರುವ ಕಂಪ್ಯೂಟರ್‍ಗಳನ್ನು ಬಳಸಿಕೊಂಡು ತರಬೇತಿ ಕೇಂದ್ರವನ್ನು ಆರಂಭಿಸಲಾಗುತ್ತಿದ್ದು, ಬಂಗಾರಪೇಟೆ ತಹಸೀಲ್ದಾರ್ ಫೆ.3 ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಮಾಜಿ ಯೋಧರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಜಗನ್ನಾಥನ್ ಕೋರಿದ್ದಾರೆ.