ಕೋಲಾರ:- ಶಿಕ್ಷಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುವ ಮೂಲಕ ಗುರುಸ್ನೇಹಿಯಾಗಿ ಕೆಲಸ ಮಾಡಿ ಎಲ್ಲರ ಪ್ರೀತಿ ವಿಶ್ವಾಸ ಉಳಿಸಿಕೊಳ್ಳಿ ಎಂದು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ್ ಮನವಿ ಮಾಡಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಎಸ್ಸಿಎಸ್ಟಿ ಶಿಕ್ಷಕರ ಸಂಘದಿಂದ ಇತ್ತೀಚೆಗೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಪ್ಪ, ನಿಕಟಪೂರ್ವ ಅಧ್ಯಕ್ಷ ಅಶ್ವಥ್ಥನಾರಾಯಣ ಅವರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.
ಮೊದಲ ಬಾರಿಗೆ ಜಿಲ್ಲೆಯ ಕೋಲಾರ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಯನ್ನು ಕೋಲಾರ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಇದು ಇತಿಹಾಸದಲ್ಲಿ ದಾಖಲಾಗಿದೆ ಎಂದರು.
ನಿಕಟಪೂರ್ವ ಅಧ್ಯಕ್ಷ ಅಶ್ವಥ್ ನಾರಾಯಣ ವಯೋ ನಿವೃತ್ತಿ ಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ತಾಲ್ಲೂಕು ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಎಸ್.ನಾರಾಯಣಸ್ವಾಮಿ ಆಯ್ಕೆಗೆ ಅವರು ಮತ್ತು ಅವರ ತಂಡದ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಸಹಕಾರ ನೀಡಿ ಹೃದಯವಂತಿಕೆ ಮೆರೆದಿದ್ದಾರೆ ಸಾಮಾಜಿಕ ನ್ಯಾಯ ನೀಡಿ ಸಮಾನತೆ, ಸಹೋದರತೆಗೆ ನಾಂದಿ ಹಾಡಿದ್ದಾರೆ ಎಂದರು.
ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಸ್ವಾರ್ಥಕ್ಕೆ . ಸ್ವಹಿತಾಸಕ್ತಿಗಾಗಿ ತಾಲ್ಲೂಕಿನ ಶಿಕ್ಷಕರಲ್ಲಿ ತಪ್ಪು ಸಂದೇಶ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ ಹಾಗೂ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಹುನ್ನಾರ ನಡೆಯುತ್ತಿದ್ದು ಒಡಕನ್ನು ಉಂಟು ಮಾಡಿ ಹೊಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. Éಇದನ್ನು ಎಸ್ಸಿಎಸ್ಟಿ ಶಿಕ್ಷಕರ ಸಂಘ ಖಂಡಿಸುತ್ತದೆ ಎಂದು ತಿಳಿಸಿದರು
ತಾಲ್ಲೂಕು ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಎಸ್.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕರ ಘನತೆಗೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸೋಣ, ಶಿಕ್ಷಕರು ನಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ, ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಎನ್.ಚಂದ್ರಪ್ಪ ಮಾತನಾಡಿ, ಶಿಕ್ಷಕರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುತ್ತೇವೆ, ತಮ್ಮ ಆಯ್ಕೆಗೆ ಸಹಕಾರ ನೀಡಿದ ನಿಕಟಪೂರ್ವ ಅಧ್ಯಕ್ಷ ಅಶ್ವಥ್ಥನಾರಾಯಣ ಮತ್ತವರ ಎಲ್ಲಾ ತಂಡಕ್ಕೂ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿ, ಸಂಘವನ್ನು ಎಲ್ಲರ ವಿಶ್ವಾಸ ಪಡೆದು ಮುನ್ನಡೆಸುವುದಾಗಿ ತಿಳಿಸಿದರು.
.ಈ ಸಂದರ್ಭದಲ್ಲಿ sಛಿ/sಣಶಿಕ್ಷಕರ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಕೆ ಟಿ ನಾಗರಾಜ್ ರವರು ಇದೇ
ಈ ಸಂದರ್ಭದಲ್ಲಿ ಎಸ್ಸಿಎಸ್ಟು ನೌಕರರ ಸಮನ್ವಯ ಸಮಿತಿ ಜಿಲ್ಲಾಧ್ಯಕ್ಷ ರಾಮಾಂಜನೇಯ, ಬೆಂಗಳೂರು ವಿಭಾಗೀಯ ಕಾರ್ಯದರ್ಶಿ ಎನ್.ವಿ.ರಮೇಶ್, ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಎಂ ಚಂದ್ರಪ್ಪ, ಮತ್ತು ಚಿಕ್ಕಣ್ಣ, ಡಿಎಸ್ಎಸ್ ಹಿರಿಯ ಮುಖಂಡ ಟಿ ಎಂ ನಾರಾಯಣಪ್ಪ, ತಾಲ್ಲೂಕು ಸಂಘದ ಪದಾಧಿಕಾರಿಗಳಾದ ಟಿ.ಎನ್. ಅಶ್ವತ್ಥಪ್ಪ, ಚಾಮುಂಡೇಶ್ವರಿದೇವಿ, ಭಾಗ್ಯಲಕ್ಷ್ಮಮ್ಮ, ಭಾಗ್ಯಮ್ಮ, ರುದ್ರಮ್ಮ, ವಿ.ಸೋಮಶೇಖರ್, ಎನ್.ಕೃಷ್ಣಪ್ಪ ಕೆಂಬೋಡಿ ಬಿ.ಮುನಿರಾಜು,ಚಿತ್ತೇರಿನಾಗರಾಜ್, ವೆಂಕಟಾಚಲಪತಿ ಗೌಡ, ಮುಖಂಡರಾದ ಸಿ.ಮಂಜುನಾಥ, ಮುನಿಯಪ್ಪ ಮತ್ತಿತರರು ಹಾಜರಿದ್ದು ಅಭಿನಂದನೆ ಸಲ್ಲಿಸಿದರು.