ಶ್ರೀನಿವಾಸಪುರ : ತಾಲ್ಲೂಕಿನ ಪುಲಗೂರಕೋಟೆ ಗ್ರಾಮ ಪಂಚಾಯತಿಯಲ್ಲಿ ಒಟ್ಟು 18 ಸದಸ್ಯರಿದ್ದು, ಅದರಲ್ಲಿ ಜೆಡಿಎಸ್ ಬೆಂಬಲಿತ 09 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 09 ಸದಸ್ಯರಿದ್ದು, ಉಪಾಧ್ಯಕ್ಷರ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಅದರಲ್ಲಿ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷರ ಸ್ಥಾನಕ್ಕೆ ರೂಪಶ್ರೀನಿವಾಸ್ ರವರು ಒಬ್ಬರೇ ಇದಿದ್ದರಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಿಂದಾಗಿ ಅವಿರೋಧವಾಗಿ ರೂಪಶ್ರೀನಿವಾಸ್ ರವರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಜೇಶ್ ತಿಳಿಸಿದರು .
ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಕೆ. ಮಂಜುನಾಥ ಮಾತನಾಡಿ ನೂತನವಾಗಿ ಉಪಾಧ್ಯಕ್ಷರಾಗಿರುವ ರೂಪಶ್ರೀನಿವಾಸ್ ರವರಿಗೆ ಶುಭ ಕೋರಿ ತಮ್ಮ ಅಧಿಕಾರದ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಮುಂಬರುವ ಗ್ರಾಮ ಪಂಚಾಯತಿ ಸದಸ್ಯರ ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಾಗಲು ಜನರಿಗೆ ಉತ್ತಮ ಸೇವೆ ಮಾಡಬೇಕೆಂದು ಉಪಾಧ್ಯಕ್ಷರಿಗೆ ಸಲಹೆ ನೀಡಿದರು ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಮಿಲಿಟ್ರರಿ ಮಂಜು, ಬಾನಪಲ್ಲಿ ರಾಮಕೃಷ್ಣ, ಗುರುಮೂರ್ತಿ, ವೇಣುಗೋಪಾಲ್, ಮುದ್ದೇಪಲ್ಲಿ ರಾಮಲಿಂಗಾರೆಡ್ಡಿ, ಜೊನ್ನಪಲ್ಲಿ ಮುನಿರೆಡ್ಡಿ, ಹಾಜರಿದ್ದರು.