

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ 124 ಮಂದಿ ಅಭ್ಯರ್ಥಿಗಳ ಹೆಸರಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಹಾಗ ಕುಂದಾಪುರ ಕ್ಷೇತ್ರದಿಂದ ಎಮ್. ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ. ಬೈಂದೂರು ಕೆ.ಗೋಪಾಲ ಪೂಜಾರಿಗೆ ಟಿಕೆಟ್ ನೀಡಲಾಗಿದೆ.
ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರಿನಿಂದ, ಮೂಡುಬಿದಿರೆಯಿಂದ ಮಿಥುನ್ ರೈ, ಬೆಳ್ತಂಗಡಿಯಿಂದ ರಕ್ಷಿತ್ ಸುವರ್ಣ, ಸುಳ್ಯ ಮೀಸಲು ಕ್ಷೇತ್ರದಿಂದ ಕೃಷ್ಣಪ್ಪ ಜಿ. ಕಣಕ್ಕಿಳಿಯಲಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯ ಕಾಪುದಿಂದ ವಿನಯ ಕುಮಾರ್ ಸೊರಕೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಕಾರವಾರ ಅಂಕೋಲಾ ಕ್ಷೇತ್ರದಿಂದ ಸತೀಶ್ ಸೈಲ್, ಭಟ್ಕಳದಿಂದ ಮಂಕಾಳ ವೈದ್ಯ, ಹಳಿಯಾಳದಿಂದಾರ ಆರ್. ವಿ. ದೇಶಪಾಂಡೆ ಸ್ಪರ್ಧೆ ಮಾಡಲಿದ್ದಾರೆ.
ನಂಜನಗೂಡು ಕ್ಷೇತ್ರದಿಂದ ದ್ರವನಾರಾಯಣ ಪುತ್ರ ದರ್ಶನ್ ದ್ರವನಾರಾಯಣ ಹಾಗೂ ರಾಜಾಜಿನಗರ ಕ್ಷೇತ್ರದಿಂದ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂ ಎಲ್ ಸಿ ಪುಟ್ಟಣ್ಣಗೆ ಟಿಕೆಟ್ ಘೋಷಿಸಲಾಗಿದೆ.
ಸಂಪೂರ್ಣ ಪಟ್ಟಿ ಇಲ್ಲಿದೆ



