ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ನಂಬಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ನರಸಿಂಹಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ ಪರಿಣಾಮವಾಗಿ ಎಸ್.ಎಂ.ವೆಂಕಟಸ್ವಾಮಿ ಅವಿರೋಧ ಆಯ್ಕೆಯಾಗಿರುವುದದಾಗಿ ಚುನಾವಣಾಧಿಕಾರಿ ಡಾ. ಮಂಜುನಾಥರೆಡ್ಡಿ ಪ್ರಕಟಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಮ್ಮ, ಪಿಡಿಒ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಎಫ್‍ಡಿಎ ದೇವರಾಜ್, ಮುಖಂಡರಾದ ಮುನಿವೆಂಕಟಪ್ಪ ಇದ್ದರು.