

ಕೋಲಾರ / 01 ಮಾರ್ಚ್ : ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳನ್ನು ನೀಡಿದೆ. ಜಾತಿ, ಧರ್ಮಕ್ಕೆ ಸೀಮಿತವಾಗಿರದೆ ಭಾರತದ ಪ್ರಜೆಗಳಾದ ನಾವು ಯಾವುದೇ ವರ್ಣಬೇದ ಇಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ದೇಶದ ಮೊದಲ ಪ್ರಜೆ ರಾಷ್ಟ್ರಪತಿಗಳಿಂದ ಹಿಡಿದು ಸಾಮಾನ್ಯ ಪ್ರಜೆಗೂ ಸಮಾನ ಅವಕಾಶಗಳನ್ನು ಸಂವಿಧಾನವು ಕಲ್ಪಿಸಿಕೊಟ್ಟಿದೆ ಎಂದು ಶ್ರೀನಿವಾಸಪುರ ಶಾಸಕರಾದ ವೆಂಕಟಶಿವಾರೆಡ್ಡಿ ರವರು ತಿಳಿಸಿದರು.
ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆÉ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶ್ರೀನಿವಾಸಪುರ ನಗರದ ಪ್ರಮುಖ ಬೀದಿಗಳಲ್ಲಿ ಸ್ತಬ್ಧ ಚಿತ್ರದ ಮೆರವಣಿಗೆ ನಡೆಯಿತು. ಮೆರವಣಿಗೆಯ ಜೊತೆಗೆ ಕಲಾವಿದರು ಸಂವಿಧಾ£ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಜಾಗೃತಿ ಗೀತೆಗಳನ್ನು ಹಾಡುವ ಮೂಲಕ ಹಾಡುಗಳಲ್ಲಿ ಜಾಗೃತಿ ಮೂಡಿಸಿದರು.
ಕಲಾವಿದರಾದ ಈನೆಲ ಈಜಲ ವೆಂಕಟಾಚಲಪತಿ, ಜನಪದ ಗಾಯಕಿ ಜ್ಯೋತಿ, ಮೂರಂಡಹಳ್ಳಿ ಚಿಕ್ಕರೆಡ್ಡೆಪ್ಪ, ಬಂಗಾರಪೇಟೆ ಬಸಪ್ಪ ಹಾಜರಿದ್ದರು.