ಕೊರೊನಾ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ : ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ

JANANUDI.COM NETWORK

ಕೊರೊನಾ ನಾಲ್ಕನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯ ಸರ್ಕಾರ ಕಡ್ಡಾಯಗೊಳಿಸಿದ್ದು, ಜನನಿಬಿಡ ಹಾಗೂ ಒಳಾಂಗಣ ಸಭೆಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಸಭೆಯಲ್ಲಿ ನೀಡಲಿರುವ ನಿರ್ದೇಶನ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಉಪಕ್ರಮ ಸದ್ಯಕ್ಕೆ ಇಲ್ಲವೆಂದು ತಿಳಿದು ಬಂದಿದೆ.
ಕೊರೊನಾ ನಾಲ್ಕನೇ ಅಲೆ ಬೆಳವಣಿಗೆ ಮತ್ತು ಕೇಂದ್ರ ಸರಕಾರದ ನೀತಿ ಕಾದು ನೋಡಲು ಸಿಎಂ ಬೊಮ್ಮಾಯಿ‌ ನಿರ್ಧರಿಸಿದ್ದಾರೆ.