ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ವಿರುದ್ಧ ಲಸಿಕೆ ನೀಡಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೂಚಿಸಿದರು.
ಪಟ್ಟuದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಕೊರೊನಾ ವಿರುದ್ಧ ಲಸಿಕೆ ನೀಡಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವಿರುದ್ಧ ಲಸಿಕೆ ನೀಡುವುದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಂಬಂಧಪಟ್ಟ ಸಿಬ್ಬಂದಿ ಸೇವಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಕಟಿಸಲಾಗಿರುವ ಯೋಜನೆಯಂತೆ ಮೊದಲ ಹಂತದಲ್ಲಿ ನಿಗದಿತ ಅವಧಿಯಲ್ಲಿ ಎರಡು ಲಸಿಕೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಆದ್ಯತೆ ಮೇರೆಗೆ ಮೊದಲು ಲಸಿಕೆ ನೀಡಲಾಗುವುದು. ತಾಲ್ಲೂಕಿನಲ್ಲಿ ಲಸಿಕೆ ನೀಡಲು 5 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲೂ 5 ಮಂದಿ ವೈದ್ಯಕೀಯ ಸಿಬ್ಬಂದಿ ಇರುತ್ತಾರೆ. ಈ ತಂಡಗಳಿಗೆ ದಿನವೊಂದಕ್ಕೆ ತಲಾ 100 ಮಂದಿಗೆ ಲಸಿಕೆ ಹಾಕುವುದನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಮೊದಲ ಹಂತದಲ್ಲಿ 1100 ಮಂದಿಗೆ ಕೊರೊನಾ ವಿರುದ್ಧ ಲಸಿಕೆ ನೀಡಲು ಯೋಜಿಸಲಾಗಿದೆ. ಈ ಕಾರ್ಯವನ್ನು ಎರಡು ದಿಗಳಲ್ಲಿ ಮುಗಿಸಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ತಜ್ಞ ಡಾ. ಜನದೀಶ್, ತಾಲ್ಲೂಕು ವೈದ್ಯಾಧಿಕಾರಿ ಎಂ.ಸಿ.ವಿಜಯ, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜಿ.ಎಸ್.ಶ್ರೀನಿವಾಸ್, ವೈದ್ಯಾಧಿಕಾರಿಗಳಾದ ಡಾ. ಸಾದಿಕ್, ಡಾ.ಅಮರಿನ್, ಆರೋಗ್ಯ ಸಿಬ್ಬಂದಿ ಲಿಡಿಯೋ, ಹರೀಶ್, ಶಿವಕುಮಾರ್, ಪ್ರಶಾಂತ್, ಕೆವಿಸಿ ರೆಡ್ಡಿ, ಮೆಹಬೂಬ್, ನಾಗರಾಜ್ ಇದ್ದರು.