ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕೊರೊನಾ ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯಬಾರದು. ಕೋವಿಡ್ ನಿರ್ಮೂಲನೆ ದೃಷ್ಟಿಯಿಂದ ಎಲ್ಲ ಅರ್ಹ ವ್ಯಕ್ತಿಗಳೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಲಸಿಕೆ ಸುರಕ್ಷಿತವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳಲು ಹೆದರಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಕಾರ್ಯಾಲಯದ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿಗೆ ಕೊರೊನಾ ವಿರುದ್ಧ ಲಸಿಕೆ ನೀಡಲಾಯಿತು. ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಕಂದಾಯ ನಿರೀಕ್ಷಕ ಶಂಕರ್, ನಾಗೇಶ್ ಇದ್ದರು.