ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ 19 ಲಸಿಕಾ ಶಿಬಿರ

JANANUDI.COM NETWORK

ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಸಮೂಹ ಸಂಸ್ಥೆಗಳ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಆರೋಗ್ಯ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ,ಬೆಳ್ಳೆ ಗ್ರಾಮ ಪಂಚಾಯತ್ ,ಪ್ರಾಥಮಿಕ ಆರೋಗ್ಯ ಕೇಂದ್ರ ಪೆರ್ಣಂಕಿಲ ಇವರ ಸಹಯೋಗದಲ್ಲಿ ಲಸಿಕ ಶಿಬಿರವನ್ನು ಏರ್ಪಡಿಸಲಾಯಿತು. ಈ ಶಿಬಿರವನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಜಾರ್ಜ್ ಡಿಸೋಜರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುಧಾಕರ ಪೂಜಾರಿ ,ಪರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ರವೀಂದ್ರ ಬೋರ್ಕರ್ ,ವಿದ್ಯಾರ್ಥಿ ನಾಯಕರಾದ ದಿಲೀಪ್ ಮತ್ತು ಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶ್ರೀಮತಿ ಸುನೀತಾ ಕಾಮತ್ ವಂದಿಸಿದರು .ಸಹಶಿಕ್ಷಕ ಜಾನ್ ಕ್ಯಾಸ್ಟಲಿನೋ ನಿರೂಪಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕಾ ವಿತರಣೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿದರು.