ಬೆಳೆ ವಿಮೆ ಯೋಜನೆಯಡಿ ಬೆಳೆ ಸಮೀಕ್ಷೆ, ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಕರಣಗಳನ್ನು ಆಕ್ಷೇಪಣೆಗಳಿದ್ದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ

ಶ್ರೀನಿವಾಸಪುರ: 2021-22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ಬೆಳೆ ಸಮೀಕ್ಷೆ ಮಾಹಿತಿಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಕರಣಗಳನ್ನು ತಾಲ್ಲೂಕಿನ ಕೃಷಿ ಇಲಾಖೆಗೆ ಸಂಬಂಧಿಸಿದ ಹೋಬಳಿ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ರೈತರಿಂದ ಆಕ್ಷೇಪಣೆಗಳಿದ್ದಲ್ಲಿ ಮೇ.31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ತಿಳಿದ್ದಾರೆ.
2021-22ನೇ ಸಾಲಿನ ಬೆಳೆ ನೋಂದಾವಣೆ ಮಾಡಲಾಗಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಸಂಬಂಧಿಸಿದ ರಸೀದಿ, ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನ ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.