JANANUDI.COM NETWORK
ಕುಂದಾಪುರ: ಸಮಾಜದ ಸಂಘಟನೆಗಳು ಕಾರ್ಯಕ್ರಮ ಸಂಘಟಿಸಿದಾಗ ಸಮಾಜ ಬಾಂಧವ ಸಹಕಾರ ಅಗತ್ಯ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಹೆಚ್ಚು ಸಮಾಜ ಬಾಂಧವರು ಆಗಮಿಸಿದಾಗ ಸಂಘಟಿಕರಿಗೆ ಕಾರ್ಯಕ್ರಮ ಆಯೋಜನೆ ಮಾಡಲು ಹುಮ್ಮಸ್ಸು ಹೆಚ್ಚುತ್ತೇದೆ. ಎಳೆಯ ಪ್ರಾಯದಲ್ಲೇ ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿದಾಗ ಆತ ಮುಂದೆ ಸಮಾಜದ ಆಸ್ತಿಯಾಗುತ್ತಾನೆ ಎಂದು ಉಡುಪಿ ಜಿಲ್ಲಾ ಸೋಮಕ್ಷತೀಯ ಗಾಣಿಗ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಹೇಳಿದರು.
ಅವರು ಭಾನುವಾರ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆದ ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಆಶಯದ ಮಾತುಗಳನ್ನಾಡಿದರು. ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ಅಭಿಲಾಷ ಬಿ.ಎ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಪರ್ಕಸುಧಾ ಪತ್ರಿಕೆಯ ಸಂಪಾದಕ ರಘುರಾಮ ಬೈಕಾಡಿ, ಕುಂದಾಪುರ ಉದ್ಯಮಿ ಪರಮೇಶ್ವರ ಜಿ.ಪಿ ಕಾರ್ಯಕ್ರಮ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಗೌರವಾಧ್ಯಕ್ಷ ಮಂಜುನಾಥ ಗಾಣಿಗ, ಪ್ರಧಾನ ಕಾರ್ಯದರ್ಶಿ ಉದಯ ಗಾಣಿಗ, ಮಹಿಳಾ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷೆ ಪ್ರಭಾವತಿ ಗಾಣಿಗ, ಗೌರವಾಧ್ಯಕ್ಷೆ ಕಲಾವತಿ, ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣಮೂರ್ತಿ, ಕೋಶಾಧಿಕಾರಿ ಕಲ್ಯಾಣಿಶಂಕರ್ ಉಪಸ್ಥಿತರಿದ್ದರು.
ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಮಾಜಿ ಅಧ್ಯಕ್ಷ ಬಿ.ಜಿ.ನಾಗರಾಜ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಮಂಜುನಾಥ ಕೆ.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಬೀಜಾಡಿ ವಿಜೇತರ ಪಟ್ಟಿ ವಾಚಿಸಿದರು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಕೋಶಾಧಿಕಾರಿನಾಗರಾಜ ಗಾಣಿಗ ಹಿಲ್ಕೋಡು ವಂದಿಸಿದರು. ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಮಾಜಿ ಕಾರ್ಯದರ್ಶಿ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ವತಿಯಿಂದ ಸಮಾಜದ ಸಾಧಕರಾದ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಶಿಕ್ಷಕ ಶೇಖರ ಗಾಣಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಉಪ್ಪುಂದ ಶ್ರೀಧರ ಗಾಣಿಗ, ಕೊಡಪಾಡಿ ಶ್ರೀ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ರಾಜು ಗಾಣಿಗ ಕೊಡಪಾಡಿ, ಕುಂದಾಪು ಮೈಲಾರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯ ಭಾಸ್ಕರ್ ಜಿ.ಕೆ, ಯೋಗದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ವಿದ್ಯಾರ್ಥಿ ಕುಮಾರಿ ಗಗನಾ ಗಾಣಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಸಾಧಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕøರ ವಿತರಿಸಲಾಯಿತು.