ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ವರದ ಬಾಲಾಂಜನೇಯಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ನಾಗರಾಜ ಶರ್ಮ (71) ಸೊಮವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು. ದೇವಾಲಯದ ಅಭಿವೃದ್ಧಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರು, ಕೆಲವು ದಿನಗಳಿಂದ ಅನಾರೋಗ್ಯ ಪೀಡತರಾಗಿದ್ದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.
ಸೋಮವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.