ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಕೋಲಾರ:- ತಾಲ್ಲೂಕಿನ ವೇಮಗಲ್ ಹೋಬಳಿಯ ಮೇಡಿಹಾಳ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿಸಿಯವರಿಗೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಥಿಲ ಕಟ್ಟಡ ನೆಲಸಮಗೊಳಿಸಲು ಕೋರಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಶಿಕ್ಷಣ ಸಂಯೋಜಕ ಬೈರೆಡ್ಡಿ ಹಾಗೂ ಮುಖ್ಯಶಿಕ್ಷಕಿ ಗಾಯತ್ರಿದೇವಿ, ಶಾಲೆಗಾಗಿ 4 ಎಕರೆ ಜಮೀನು ಮಂಜೂರು ಮಾಡಿರುವ ತಮಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ, ಈಗ ಶಾಲೆಗೆ ಹೊಸ ಕಟ್ಟಡವಿದ್ದು, ಮಕ್ಕಳ ಕಲಿಕೆಗೆ ಯಾವುದೇ ಅಡ್ಡಿಯಿಲ್ಲ ಆದರೆ, ಹಳೆಯ ಕಟ್ಟಡ ನೆಲಸಮ ಮಾಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಮಾಂಜಿ, ನಾಗೇಶ್, ಶಿಕ್ಷಕರು, ಎಸ್‍ಡಿಎಂಸಿ ಅಧ್ಯಕ್ಷರು,ಸದಸ್ಯರು ಹಾಜರಿದ್ದರು.