

ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ರವಿವಾರ ಮಂಡ್ಯದಲ್ಲಿ ನೀಡಿರುವ ಅತ್ಯಂತ ಅವಹೇಳನಕಾರಿ ಹೇಳಿಕೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು. ಇಂದು ಆತನ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 354, 294, 509, 506, 1534, 295, 295%, 298
ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೋರಾಟಗಾರ್ತಿ ನಜ್ಮಾನರೀರ್ ಚಿಕ್ಕನೇರಳೆ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಆರೋಪಿ ವಿರುದ್ದ ಈ ಪ್ರಕರಣ ದಾಖಲಾಗಿದೆ. ಮುಸ್ಲಿಂ ಮಹಿಳೆಯರ ಕುರಿತು ಪ್ರಭಾಕರ ಭಟ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಧರ್ಮಗಳ ನಡುವೆ ಗಲಭೆ, ಅಶಾಂತಿ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಅಣಕಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಭಾಕರ ಭಟ್ ವಿರುದ್ಧ ಈ ಹಿಂದೆಯೂ ರಾಜ್ಯದ ಹಲವು ಠಾಣೆಗಳಲ್ಲೂ ಈ ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರ ವಿರುದ್ಧ ರೌಡಿಶೀಟ್ ತೆರೆಯಬೇಕು ಎಂದು ನಜ್ಮಾದೂರಿನಲ್ಲಿ ಒತ್ತಾಯಿಸಿದ್ದಾರೆ.