JANANUDI.COM NETWORK
ಬೆಂಗಳೂರು, ಮಾ. 15: ಇದೀಗಲೇ ಹಿಜಾಬ್ ಗೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು, ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ. ಜತೆಗೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ, ಫೆಬ್ರವರಿ 25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಿದ್ದಾರೆ, ಇಲ್ಲಿ ಗಮನಿಸಬೇಕಾದ ವಿಚಾರ ನ್ಯಾಯಮೂರ್ತಿಗಳಲ್ಲಿ ಓರ್ವರು ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಮುಸ್ಲಿಂ ಆಗಿರುವಾಗ ಈ ವಿವಾದಕ್ಕೆ ತೀರ್ಪು ನೀಡುವಾಗ ಇಸ್ಲಾಂ ಬಗ್ಗೆ ಅಧ್ಯಯನ ಮಾಡಿಯೇ, ಈ ರೀತಿಯ ತೀರ್ಪು ನೀಡಲು ಸಹಕರಿಸಿರಬಹುದು ಎಂಬ ಅಂಶವನ್ನು ಗಮನ ನೀಡಬೇಕಾಗುತ್ತದೆ.