ಶ್ರೀನಿವಾಸಪುರ 2 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಹೇಳಿದರು.
ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗು ಕುಂದ ಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಎಂದರು.
ಗ್ರಾಮಗಳಲ್ಲಿ ಆಗಿರುವ ಪ್ರತಿ ಒಂದು ಅಭಿವೃದ್ದಿ ಕಾಮಗಾರಿಗಳ ಪರಿಶೀಲಿನೆ ಮಾಡಲಾಯಿತು. ಉಳಿದಿರುವ ಕಾಮಗಾರಿಗಳನ್ನು ಪೂರ್ಣಗಳಿಸುವಂತೆ ಗ್ರಾಮಸ್ಥರಿಗೆ ತಿಳಿಸಿದರು. ಸರ್ಕಾರದ ಅನುದಾನವನ್ನು ಗ್ರಾಮಸ್ಥರು ಸಮರ್ಪಕವಾಗಿ ಬಳಿಸಿಕೊಂಡಾಗ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಎಂದರು.
ಮುಖಂಡರಾದ ದ್ವಾರಸಂದ್ರ ಮುನಿವೆಂಕಟರೆಡ್ಡಿ, ಸನಂತ್, ಸಾತಾಂಡ್ಲಹಳ್ಳಿ ಮಂಜುನಾಥರೆಡ್ಡಿ , ಟಿ.ನಾರಾಯಣಸ್ವಾಮಿ, ಮಂಜೇಶ್ ಇತರರು ಇದ್ದರು.