ಗ್ರಾಮ ಪಂಚಾಯಿತಿಗಳಿಗೆ ಶಕ್ತಿ ತುಂಬಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ :ಲಕ್ಷ್ಮಿ ಹೆಬ್ಬಾಳ್ಕರ್

ಕುಂದಾಪುರ: ಹಳ್ಳಿಗಳ ಸುಧಾರಣೆಯು ಗ್ರಾಮ ಪಂಚಾಯತಿಗಳಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಶಕ್ತಿ ತುಂಬಿದರೆ ಆ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ,ತಹಶೀಲ್ದಾರ್ ಶೋಭಾ ಲಕ್ಷ್ಮಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಭಾರತಿ, ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಬಿದ್ಕಲ್ ಕಟ್ಟೆ ಶಾಲಾ ಶಿಕ್ಷಕ ಸತೀಶ್ ಶೆಟ್ಟಿಗಾರ್ ಸ್ವಾಗತಿಸಿದರು.