


ಶ್ರೀನಿವಾಸಪುರ: ದಿಂಬಾಲ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಗುರುವಾರ ಶ್ರೀದೇವಿ, ಭೂದೇವಿ ಸಮೇತ ವೆಂಕಟರಮಣಸ್ವಾಮಿ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಲಾಗಿತ್ತು.
ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ದೇವರ ದರ್ಶನ ಪಡೆದರು. ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗಿತ್ತು. ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಡಾ. ವೈ.ವಿ.ವೆಂಕಟಾಚಲ ಹರಾಜಿನಲ್ಲಿ ದೇವರ ಲಾಡು ಖರೀದಿಸಿ ವಿತರಿಸಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಾಸಕ ಕೆ.ಆರ್.ರಮೇಶ್ ಕುಮಾರ್ ಮತ್ತಿತರ ಮುಖಂಡರು ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.