ಶ್ರೀನಿವಾಸಪುರ : ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. , ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್‌ಗಳು ಮತ್ತು ಮೃತಪಟ್ಟ ಸದಸ್ಯರ ಕೋಮುಲ್ ವಿಮಾ ಚೆಕ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ ಎನ್.ಹನುಮೇಶ್ ರವರು ಮಾತನಾಡಿ , ನಿವೃತ್ತಿ ಹೊಂದಿದ ಎಲ್ಲಾ ಸಿಬ್ಬಂದಿಗಳನ್ನು ಸನ್ಮಾನಿಸಿ , ಸಂಘಗಳಿಗೆ ನೀಡಿದ ನಿರಂತರ ಸೇವೆಯನ್ನು ಸ್ಮರಿಸುತ್ತಾ ಸಿಬ್ಬಂದಿಯವರ ನಿವೃತ್ತಿ ಪ್ರೋತ್ಸಾಹ ಧನ ಚೆಕ್‌ಗಳು ಮೊತ್ತ 12,25,000 / – ರೂಗಳು ಹಾಗೂ ಮೃತಪಟ್ಟ ಸದಸ್ಯರ ಕೋಮುಲ್ ವಿಮಾ ಚೆಕ್ ರೂ .25,000 / ಗಳ ಚೆಕ್‌ಗಳನ್ನು ವಿತರಿಸಿದರು.
ಮತ್ತು ಗಫಾರ್ ಖಾನ್ ಮೊಹಲ್ಲಾ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕ.ಹಾ.ಮ. ಸಂಜೀವಿನಿ ಯೋಜನೆಯಡಿಯಲ್ಲಿ Automatic Milk Collection Unit with Milk Analyser ಘಟಕ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಹಾಲಿನಲ್ಲಿರುವ ಫ್ಯಾಟ್ ಅಂಶವನ್ನು ಪರೀಕ್ಷಿಸಲು ಎಲೆಕ್ಟಿಕ್ ಗರ್ಭರ್ ಯಂತ್ರಗಳನ್ನು ಸಬ್ಸಿಡಿ ಧರದಲ್ಲಿ ವಿತರಿಸಿದರು .
ಪ್ರಭಾರೆ ಉಪ ವ್ಯವಸ್ಥಾಪಕರಾದ ಕೆ.ಎಂ.ಮುನಿರಾಜು ರವರು ಮಾತನಾಡಿ , ಸಂಘಗಳಲ್ಲಿ ವೈಜ್ಞಾನಿಕವಾಗಿ ಹಾಲಿನ ಗುಣಮಟ್ಟವನ್ನು ಪರೀಕ್ಷೆ ಮಾಡಿ , ಪ್ಯಾಟ್ ಮತ್ತು ಎಸ್.ಎನ್.ಎಫ್ . ಆಧಾರದ ಮೇಲೆ ಎಲ್ಲಾ ಯಂತ್ರಗಳನ್ನು ಬಳಸಿಕೊಂಡು ರೈತರಿಗೆ ಹೆಚ್ಚಿನ ಧರ ನೀಡಿದ್ದಲ್ಲಿ ರೈತರಿಗೆ ಸಂಘಗಳ ಮೇಲೆ ನಂಬಿಕೆ ಹೆಚ್ಚಾಗಿ ಉತ್ತಮ ಗುಣಮಟ್ಟ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುತ್ತಾರೆ , ಸಹಕಾರ ಸಂಘಗಳು ಅಭಿವೃದ್ಧಿಯಾಗುತ್ತದೆ ಹಾಗೂ ಖಾಸಗಿ ಡೇರಿಗಳ ಹಾವಳಿ ಸಹ ಕಡಿಮೆ ಆಗುವುದೆಂದು ತಿಳಿಸಿದರು .
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ನಿರ್ದೇಶಕರು ದ್ವಾರಸಂದ್ರ ಸಿ.ಮುನಿವೆಂಕಟಪ್ಪ , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆಲಂಬಗಿರಿ ಅಯ್ಯಪ್ಪ ರವರು , ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಕೇತಗಾನಹಳ್ಳಿ ನಾಗರಾಜ್‌ರವರು , ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆ.ಕೆ.ಮಂಜು, ಶ್ರೀನಿವಾಸಪುರ ಉಪ ಕಛೇರಿಯ ವಿಸ್ತರಣಾಧಿಕಾರಿಗಳಾದ ಎಂ.ಜಿ.ಶ್ರೀನಿವಾಸ್ , ಎನ್.ಶಂಕರ್ , ಪಿ.ಕೆ.ನರಸಿಂಹರಾಜು , ಕೆ.ಪಿ.ಶ್ವೇತ , ಜಿ.ಎನ್.ಗೋಪಾಲಕೃಷ್ಣಾರೆಡ್ಡಿ ಹಾಗೂ ಶಿಬಿರದ ಸಿಬ್ಬಂದಿಯವರು ಮತ್ತು ಸಂಘದ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರು , ಸಿಬ್ಬಂದಿಯವರು ಮತ್ತು ಫಲಾನುಭವಿಗಳು ಹಾಜರಿದ್ದರು.