ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡ್ಲಕಟ್ಟೆಯಲ್ಲಿ ಕಲಿಯುತ್ತಿರುವ ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳನ್ನು ಐ ಎಂ ಜೆ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ ಮ್ಯಾನರಾದ ಶ್ರೀ ಸಿದ್ದಾರ್ಥ್. ಜೆ ಶೆಟ್ಟಿಯವರ ಆಶಯಕ್ಕೆ ಅನುಗುಣವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ.ಎಂ ಪಟೇಲ್ ವಿತರಿಸಿದರು ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಶೇರೆಗಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಆಚಾರ್, ಕಾರ್ಯದರ್ಶಿಯಾದ ಶ್ರೀ ಮಹೇಂದ್ರ ಯು.ಎಸ್, ಶ್ರೀಮತಿ ಸುಮನ, ಸಮೂಹ ಸಂಪನ್ಮೂಲ, ಕೋಣಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಾಗವೇಣಿಯವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಕೊಡೆ ಮತ್ತು ಬ್ಯಾಗ್ ಗಳನ್ನು ವಿತರಿಸಲಾಯಿತು.