ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಟ್ರಸ್ಟ್ ವತಿಯಿಂದ ಜೂನ್ 19ರಂದು ವಿದ್ಯಾರ್ಥಿ ಸಹಾಯಧನ ವಿತರಣೆ

JANANUDI.COM NETWORK

ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಟ್ರಸ್ಟ್ ವತಿಯಿಂದ ಜೂನ್ 19ರಂದು ವಿದ್ಯಾರ್ಥಿ ಸಹಾಯಧನ ವಿತರಣೆ
ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೂನ್ 19 ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಅರ್ಹ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿ ಮಾರ್ಗದರ್ಶನ ನೀಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿನ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆಯುವ ಈ ಸಮಾರಂಭದಲ್ಲಿ ಹಿರಿಯ ಲೇಖಕ, ಜಾನಪದ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಧನ ವಿತರಿಸಲಿದ್ದಾರೆ. ಲೇಖಕಿ, ಕಾದಂಬರಿಗಾರ್ತಿ ಉಡುಪಿಯ ಸೌಮ್ಯ ಪುತ್ರನ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನಾಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು, ಪೋಷಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಬೇಕೆಂದು ಗಿಳಿಯಾರು ಕುಶಲ ಹೆಗ್ಡೆ ದತ್ತಿ ನಿಧಿಯ ವಿಶ್ವಸ್ಥರು ವಿನಂತಿಸಿದ್ದಾರೆ.