

ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚಾರ್ಯ ಅಕಾಡೆಮಿ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ನಡೆಸಲಾಯಿತು.
ಶಿಕ್ಷಣ ಎನ್ನುವುದು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಮಕ್ಕಳು ಕೇವಲ ಪಠ್ಯಪುಸ್ತಕದ ಹುಳುಗಳಾಗಿರದೆ ತಮ್ಮನ್ನು ಎಲ್ಲಾ ರೀತಿಯ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ. ಮಕ್ಕಳ ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಅಬಾಕಸ್ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಾಲಾ ಮುಖ್ಯಸ್ಥೆ ಶ್ರೀಮತಿ ರೇಷ್ಮಾ ಪ್ರದೀಪ್ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು . ಈ ಸ್ಪರ್ಧೆಯಲ್ಲಿ ಒಟ್ಟು 46 ವಿದ್ಯಾರ್ಥಿಗಳು ಭಾಗವಹಿಸಿ 8 ವಿದ್ಯಾರ್ಥಿಗಳು ಚಾಂಪಿಯನ್ ಆಫ್ ಚಾಂಪಿಯನ್, 8 ವಿದ್ಯಾರ್ಥಿಗಳು ಚಾಂಪಿಯನ್, 8 ಪ್ರಥಮ ಹಾಗೂ 22 ವಿದ್ಯಾರ್ಥಿಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದುಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮ ಪ್ರದೀಪ್ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕಿ ಜಯಶೀಲ ನಾಯಕ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಅಬಾಕಸ್ ಶಿಕ್ಷಕಿಯಾದ ಶ್ರೀಮತಿ ಶೃತಿ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷರಾದ ರೇಷ್ಮಾ ಪ್ರದೀಪ್ ಶಾಲಾ ಮುಖ್ಯೋಪಾಧ್ಯಾಯಿನಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕ – ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು..

