JANANUDI.COM NETWORK
ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಅವರಿಗೆ ಸಾರ್ವಜನಿಕ ಸನ್ಮಾನ
ಕೋಟ:ನನ್ನೂರಿನ ಸಂಘ ಸಂಸ್ಥೆಗಳು ನನ್ನನ್ನು ಗುರುತಿಸಿ ಊರ ಗೌರವದ ಹೆಸರಿನಲ್ಲಿ ಸನ್ಮಾನಿಸಿರುವುದು ಸಂತಸ ತಂದಿದೆ. ಎಲ್ಲರಿಗೂ ಅಭಾರಿಯಾಗಿದ್ದೇನೆ. ಈ ಸನ್ಮಾನ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವ ಹುಮ್ಮಸ್ಸು ನೀಡಿದೆ ಎಂದು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಪಿ.ಕೆ ಹೇಳಿದರು.
ಅವರು ಶನಿವಾರ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ-ಗೋಪಾಡಿಮಿತ್ರ ಸಂಗಮ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ
ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ಊರ ಗೌರವ-ಸಾರ್ವಜನಿಕ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸಮಾರಮಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷತೆ ಸುಮತಿ ನಾಗರಾಜ್ ವಹಿಸಿದ್ದರು. ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅಭಿನಂದನಾ ಭಾಷಣಗೈದರು.ವೇದಮೂರ್ತಿ ಶಂಕರನಾರಾಯಣ ಬಾಯರಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಪ್ರಕಾಶ ಗಾಣಿಗ, ಮುಖ್ಯ ಶಿಕ್ಷಕಿ ಶ್ರೀಮತಿ ಭಟ್, ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಬೀಜಾಡಿ ನಂದಿನಿ ಫ್ರೆಂಡ್ಸ್ ಅಧ್ಯಕ್ಷ ಪ್ರಶಾಂತ್ ಗೋಳಿಬೆಟ್ಟು, ಬೀಜಾಡಿ ಸಂಗಮ ಸ್ವಸಹಾಯ ಸಂಘದ ಅಧ್ಯಕ್ಷ ರಾಜೇಶ್ ಆಚಾರ್ಯ ಗೋಪಾಡಿ, ಬೀಜಾಡಿ-ಗೋಪಾಡಿ ರೋಟರಿ ಸಮುದಾಯ ದಳ ಅಧ್ಯಕ್ಷ ಗಿರೀಶ್ ಕೆ.ಎಸ್, ಬೀಜಾಡಿ ಬೆಳ್ಳಂಕಿ ಫ್ರೆಂಡ್ಸ್‍ನ ಉದಯ, ಕೋಟೇಶ್ವರ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ಸುನೀಲ್ ನಾಯ್ಕ್, ರೋಟರಿ ಕ್ಲಬ್ ಕುಂದಾಪುರ ರಿವರ್‍ಸೈಡ್ ಅಧ್ಯಕ್ಷ ರಾಮಕೃಷ್ಣ ಐತಾಳ್, ಬೀಜಾಡಿ ಮಿತ್ರ ಸಂಗಮದ ಕಾರ್ಯದರ್ಶಿ ರಾಜೇಶ್ ಆಚಾರ್ಯ,ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಚಂದ್ರ ಬಿ.ಎನ್ ಮೊದಲಾದವರು ಉಪಸ್ಥಿತರಿದ್ದರು.
ಮಿತ್ರ ಸಂಗಮದ ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು. ಡಾ.ಗಣೇಶ್ ಗಂಗೊಳ್ಳಿ ಪ್ರಾರ್ಥಿಸಿದರು. ಮಿತ್ರ ಸಂಗಮದ ಕೋಶಾಧಿಕಾರಿ ಅನುಪ್ ಕುಮಾರ್ ಬಿ.ಆರ್ ಸನ್ಮಾನಪತ್ರ ವಾಚಿಸಿದರು. ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.