ದ.ಕ. ಜಿಲ್ಲೆಯಲ್ಲಿ ಜ.10 ರಿಂದ ಕೋವಿಡ್ ಬೂಸ್ಟರ್ ಡೋಸ್ ಅಭಿಯಾನ ಆರಂಭ : ದ.ಕ. ಜಿಲ್ಲಾಧಿಕಾರಿ

JANANUDI.COM NETWORK

ದ.ಕ. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜ.10ರಂದು ಜಿಲ್ಲಾಡಳಿತ ಚಾಲನೆ ನೀಡಲಿದೆಯೆಂದು, ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಸೋಮವಾರ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದನ್ನು ತಿಳಿಯಪಡಿಸಿದಾರು.
ಜಿಲ್ಲೆಯಲ್ಲಿ ಇದುವರಿಗೆ 16 ಲಕ್ಷ ಮಂದಿಗೆ ಮೊದಲ ಡೋಸ್ ಸಂಪೂರ್ಣಗೊಂಡಿದ್ದು, ಶೇ.94ರಷ್ಟು ಸಾಧನೆ ಮಾಡಲಾಗಿದೆ. ಶೇ.80ರಷ್ಟು ಮಂದಿ ಎರಡನೇ ಡೋಸ್ ಕೂಡಾ ಪಡೆದಿದ್ದಾರೆ. ಇಲ್ಲಿಯವರೆಗೆ ಯಾರಿಗೂ ವ್ಯಾಕ್ಸಿನ್ ನಿಂದಾಗಿ ಯಾರಿಗೂ ಅಡ್ಡ ಪರಿಣಾಮ ಕಂಡುಬಂದಿಲ್ಲ. 1 ಲಕ್ಷ ಮಂದಿ ಲಸಿಕೆ ಪಡೆಯಲು ಬಾಕಿ ಇದ್ದು, ವಿದ್ಯಾರ್ಥಿಗಳು ಪ್ರತಿ 10 ಮನೆಗಳ ಜವಾಬ್ದಾರಿ ತೆಗೆದುಕೊಂಡು ವ್ಯಾಕ್ಸಿನ್ ಹಾಕಿಸುವ ಯೋಜನೆಗೆ ಸಹಕರಿಸಬೇಕು, ಜಿಲ್ಲಾಡಳಿತದ ಏಜೆಂಟ್ ಆಗಿ ವಿದ್ಯಾರ್ಥಿಗಳು ಕೆಲಸ ಮಾಡಬೇಕು” ಹೇಳಿದರು.