ಶ್ರೀನಿವಾಸಪುರ 2 : ಅಂಗವಿಕಲ್ಯ ಶಾಪ ಎಂದು ಭಾವಿಸದೆ ಸಮಾಜದಲ್ಲಿ ಗೌರವಹಿತ ಜೀವನ ನಡೆಸಲು ಮುಂದಾಗಿ ಎಂದು ಪುರಸಭೆ ವ್ಯವಸ್ಥಾಪಕ ಜಿ.ನವೀನ್ಚಂದ್ರ ಹೇಳಿದರು.
ಪಟ್ಟಣದ ಪುರಸಭೆ ಕಛೇರಿ ಸಭಾಂಗಣದಲ್ಲ್ಲಿ ಮಂಗಳವಾರ ವಿಕಲಚೇತನರ ಸಮನ್ವಯ ವಿಶೇಷ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.
ಸಮಾಜದಲ್ಲಿ ಎಲ್ಲರಿಗೂ ಅವರದ್ದೆ ಆದ ಸ್ಥಾನ ಮಾನ ಇದ್ದು, ಯಾವುದೇ ಹಿಂಜರಿಕೆ ಇಲ್ಲದೆ ಮುಂದೆ ಸಾಗುವ ಕಾರ್ಯ ಮಾಡಿ ಎಂದು ಸಲಹೆ ನೀಡಿದರು. ಸಮ ಸಮಾಜ ನಿರ್ಮಿಸುವಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನಗಳೂ ನಡೆದಿವೆ ಎನ್ನುತ್ತಾ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವುದಾಗಿ ತಿಳಿಸಿದರು.
ಅಂಗವಿಲಕರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸಗೌಡ ಮಾತನಾಡಿ ವಿಕಲಚೇತನರ ಕುಂದುಕೊರತೆಗಳ ಬಗ್ಗೆ ಮಾಹಿತಿ ನೀಡಿದರು. ಪುರಸಭೆ ವತಿಯಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅರ್ಹಫಲಾನುಭವಿಗಳಿಗೆ ವಿತರಿಸುವಂತೆ ಮನವಿ ಮಾಡಿದರು.
ಕಂದಾಯ ಅಧಿಕಾರಿ ವಿ.ನಾಗರಾಜ್, ಪದಾಧಿಕಾರಿಗಳಾದ ಆನಂದ್, ರಾಮಚಂದ್ರಪ್ಪ ಇದ್ದರು.