ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಅಂಬೇಡ್ಕರ್ ಜೀವನ ಶ್ರದ್ಧೆಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ್ ಬಡತನದಲ್ಲಿ ಬದುಕಿದರಾದರೂ, ಎಂದು ವೈಯಕ್ತಿಕ ಉಪಯೋಗಕ್ಕಾಗಿ ಕೈಯೊಡ್ಡಿದವರಲ್ಲ. ಅನ್ಯರ ಮುಂದೆ ಕೈಯೊಡ್ಡುವುದು ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ ಎಂಬುದು ಅವರ ದೃಢವಾದ ನಂಬಿಕೆಯಾಗಿತ್ತು. ಹಾಗಾಗಿಯೇ ಅವರು ಜಗತ್ತಿನ ಮಹಾನ್ ವ್ಯಕ್ತಿಗಳ ಸಾಲಿಗೆ ಸೇರಲು ಸಾಧ್ಯವಾಯಿತು ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಬಿಇಒ ವಿ.ಉಮಾದೇವಿ, ಪೊಲೀಸ್ ಇನ್ಸ್‍ಪೆಕ್ಟರ್ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಮೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭಾದ್ಯಕ್ಷ ಎಂ.ಎನ್.ಲಲಿತಾ ಶ್ರೀನಿವಾಸ್, ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಸದಸ್ಯರಾದ ಬಿ.ವೆಂಕಟರೆಡ್ಡಿ, ನಾಗರಾಜ್, ಮುಖಂಡರಾದ ಎಂ.ಶ್ರೀನಿವಾಸನ್, ಮುಖಂಡರಾದ ರಾಮಾಂಜಮ್ಮ, ವೆಂಕಟೇಶ್, ಈರಪ್ಪ, ಟಿ.ನಾರಾಯಣಸ್ವಾಮಿ, ರಾಮಮೂರ್ತಿ ಇದ್ದರು.
