ಡಾ.ವೀರೇಂದ್ರ ಹೆಗ್ಗಡೆಯವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳು ರಾಜ್ಯದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದೆ :ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ 1 : ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳು ಇಂದು ರಾಜ್ಯದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ ಎಂದು ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ಅಭಿಪ್ರಾಯಪಟ್ಟರು.
ರಾಯಲ್ಪಾಡಿನ ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಕಚೇರಿಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಚಂದ್ರಶೇಖರ್‍ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ, ತರಬೇತಿ,ಮಾನವ ಸಂಪನ್ಮೂಲ ಬಳಕೆ ಮುಂತಾದ ವಿಷಯಗಳು ಯೋಜನೆಯ ಚಿಂತನೆಯ ವಿಷಯ . ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಯೋಜನೆ ದೊಡ್ಡ ಕಾರ್ಯಕರ್ತರ ಪಡೆಯನ್ನೇ ಹೊಂದಿದೆ.
ಗ್ರಾಮೀಣಾಭಿವೃದ್ಧಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುತ್ತಿರುವುದು , ಜಿಲ್ಲೆಯ ನಿರ್ದೇಶಕ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ರೂಪರೇಷಗಳೇ ಇದಕ್ಕೆ ಕಾರಣ . ಗ್ರಾಮೀಣ ಭಾಗದ ಮಹಿಳೆಯರು , ರೈತರು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾ ನಿರ್ದೇಶಕ ಚಂದ್ರಶೇಖರ್,ತಾಲೂಕು ಯೋಜಾಧಿಕಾರಿ ಸುರೇಶ್‍ಗೌಡ,ಗ್ರಾ.ಪಂ.ಮಾಜಿ ಸದಸ್ಯ ಸಿಮೆಂಟ್‍ನಾರಾಯಣಸ್ವಾಮಿ ಇದ್ದರು.