



ಶ್ರೀನಿವಾಸಪುರ : ತಾಲ್ಲೂಕಿನ ಮೀಸಗಾನಹಳ್ಳಿ ಕ್ರಾಸ್ ಸಮೀಪ ನಡೆದಿದೆ. ಮೃತರನ್ನು ಚಿಂತಾಮಣಿ ಪಟ್ಟಣದ ಉಮೇಶ್ (45) ಎಂದು ಗುರುತಿಸಲಾಗಿದೆ. ಇವರು ಪತ್ರಿಕೆ ಸಾಗಾಟ ಮಾಡುತ್ತಿದ್ದ ವಾಹನದ ಚಾಲಕರಾಗಿದ್ದು, ಯಲ್ದೂರು ಗ್ರಾಮದಲ್ಲಿ ಪತ್ರಿಕೆಗಳನ್ನು ವಿತರಣೆ ಮಾಡಿ ವಾಪಸ್ಸು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

