

ಹಾಸನ, ಜು.೧೮: ಕಳೆದೊಂದೆರಡು ವಾರಗಳಿಂದ ಸಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ
ಇಂದು (ಗುರುವಾರ) ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರು3 ಸುಜುಕಿ ಕಂಪನಿಯ ಓಮಿಸಿ ಕಾರು ಮೇಲೆ ಬಿದ್ದಿದೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ದುರ್ಫಟನೆ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಭಾರಿ ಮಳೆಯಲ್ಲಿ ಚಪಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಓಮಿಸಿ ಕಾರು ಮಣ್ಣಿನಡಿ ಸಿಲುಕಿದೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಮಾಹಿತಿ ಇದೆ.
ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಗುಡ್ಡಕುಸಿತ ಉಂಟಾಗಿ ಕಾರಿನ ಮೇಲಿ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಬಕಿದೆ. ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪಸಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ
ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.ಈ ಸಂದರ್ಭದಲ್ಲಿ ಅಖಿಲೇಶ್ ಗೂ ಸಣ್ಣಪುಟ್ಟಗಾಯಗಳಾಗಿದ್ದು, ಪಟ್ಟಣದ ಕ್ರಾಫರ್ಡ್ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಅಸ್ಪತ್ರೆಗೆ ದಾಖಲಾಗಿದ್ದಾರೆ.
ಗುಡ್ಡಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವು ಗೊಳಿಸು ಕಾರ್ಯದಲ್ಲಿ ನಿರತರಾಗಿದೆ. ಹಾಸನದ ಕಂದಲಿ ಗ್ರಾಮದ ಬಳಿಯೇ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ ರಸ್ತೆಯಲ್ಲೂ ಪ್ರಯಾಣ ದುಸ್ತರವಾಗಿದ್ದು, ಹಾಸನ ಬಳಿಯೇ ವಾಹನ ಸಿಲ್ಲಿಸಲು ಪೊಲೀಸರು ಸೂಚನೆ ನೀಡುತ್ತಿದ್ದಾರೆ.
