ಕೋಲಾರ : ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಇಂದು ಕೋಲಾರ ಜಿಲ್ಲೆಯ ಮಾಲೂರಿನ ಮಾಸ್ತಿಲ್ಲಿ ಪಂಚಮಿತ್ರ ವಾಟ್ಸ್ ಆಫ್ ಚಾಟ್ನ್ನು ಲೋಕಾರ್ಪಣೆ ಮಾಡಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ವಿವರಗಳನ್ನು ಹಾಗೂ ಆಯಾ ಗ್ರಾಮ ಪಂಚಾಯತಿಗೆ ಸಂಬಂಧಿಸಿದ ದೂರು ಹಾಗೂ ಸೇವೆಗಳಿಗೆ ಒಂದೇ ಸೂರಿನಡಿ ವ್ಯವಸ್ಥೆ ಮೇಲ್ಕಂಡ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದರು.
ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಹಲವಾರು ವೆಬ್ಸೈಟ್ ಮತ್ತು ಪೋರ್ಟಲ್ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ಸೈಟ್ ಅಥವಾ ಪೋರ್ಟಲ್ಗಳು ಇರುವುದಿಲ್ಲ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಿ ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, ದೇಶದಲ್ಲೇ ಪ್ರಪ್ರಥಮ ಬಾರಿಗೆ ವಾಟ್ಸ್ ಆಫ್ ಚಾಟ್ನ್ನು ಮೊ.ಸಂ. 8277506000 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ಧಿ ಪಡಿಸಿ ಅನುಷ್ಠಾನಗೊಳಿಸಲಾಗಿದೆ.
ಇನ್ನೂ ಮುಂದೆ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು, ಸೇವೆಗಳಿಗೆ ಅರ್ಜಿ ಮತ್ತು ಕುಂದುಕೊರತೆಗಳನ್ನು ವಾಟ್ಸ್ ಆಫ್ ಮೂಲಕ ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತ್ಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಆರ್.ಟಿ.ಸಿ ದಾಖಲೆಗಳು, ಸ್ವ-ಸಹಾಯ ಗುಂಪಿನ ವಿವರಗಳುನ್ನು ದಾಖಲಿಸಬಹುದು.
ವಾಟ್ಸ್ಆಫ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದು. ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದು ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದು ಎಂದು ಅವರು ತಿಳಿಸಿದರು. ಕಾರ್ಯಕ್ರಮದ OSAAT ನಂತರ ಸಂಸ್ಥೆ ವತಿಯಿಂದ 100ನೇ ನೂತನ ಶಾಲಾ ಕಟ್ಟಡ ಗುದ್ದಲಿ ಪೂಜೆಯನ್ನು ಹೊಸ ಬಸ್ ನಿಲ್ದಾಣದಲ್ಲಿ ನೆರವೇರಿಸಿದರು.
ಸಮಾರಂಭದಲ್ಲಿ ಮಾಲೂರು ಶಾಸಕರಾದ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ. ನಾರಾಯಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಕೋಲಾರ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ಮಾಲೂರು ತಾಲ್ಲೂಕು ತಹಶೀಲ್ದಾರ್ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾಮಚಂದ್ರಪ್ಪ, ಶಾಲಾ ಶಿಕ್ಷಣ ಇಲಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.