ಬದಲಾದ ಕಾಲಕ್ಕೆ ಅಗತ್ಯವಾದ ಶಿಕ್ಷಣ ನೀಡಬೇಕು ; ಸಿ. ಆರ್ .ಅಶೋಕ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರ ಫೆ. 27 : ಜಗತ್ತು ನಿರಂತರ ಬದಲಾವಣೆಯಿಂದ ಕೂಡಿದೆ. ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅದರಲ್ಲೂ ಮಾಹಿತಿ ತಂತ್ರಜ್ಞಾನ ನಂತರ ಬದಲಾವಣೆ ಹೆಚ್ಚು ಕೂಡಿದ್ದು ಇದರಿಂದ ಬದಲಾದ ಕಾಲಕ್ಕೆ ಅಗತ್ಯವಾದ ಶಿಕ್ಷಣ ನೀಡಬೇಕಾದುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ. ಆರ್. ಅಶೋಕ್ ಅಭಿಪ್ರಾಯಪಟ್ಟರು
ಬಂಗಾರಪೇಟೆ ತಾಲ್ಲೂಕಿನ ಹುದುಕುಳ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಕರ್ನಾಟಕ ಜ್ಞಾನ ವಿಜ್ಞಾನ ಜಿಲ್ಲಾ ಸಮಿತಿ ಏರ್ಪಡಿಸಿದ್ದ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ ಸಿ.ವಿ.ರಾಮನ್ ಭಾವಚಿತ್ರಕ್ಕೆ ಪುμÁ್ಪಂಜಲಿ ಅರ್ಪಿಸಿ ಮಾತನಾಡಿದರು.
ಶಿಕ್ಷಣ ಸಾರ್ವತ್ರೀಕರಣಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಆದರೆ ಮಗುವನ್ನು ಶಾಲೆಯತ್ತ ಆಕರ್ಷಿಸುವ ಹಾಗೂ ಸಮುದಾಯವನ್ನು ಶಾಲೆಯ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸುವ ಪ್ರಯತ್ನದಲ್ಲಿ ಸಂಘ ಸಂಸ್ಥೆಗಳ ಪಾತ್ರ ಶ್ಲಾಘನೀಯ ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಶಿಕ್ಷಣಾಸಕ್ತರು ಆಗಿಂದಾಗೆ ಒಂದೆಡೆ ಕಲೆತು ಚರ್ಚೆ ಮಾಡುವ ಅಗತ್ಯವಿದೆ ಎಂದರು .
ಜ್ಞಾನ ಮತ್ತು ವಿಜ್ಞಾನವನ್ನು ಜನಪ್ರಿಯಗೊಳಿಸುವುದು ವೈಜ್ಞಾನಿಕ ಚಿಂತನೆ ಬೆಳೆಸುವುದು ವಿಜ್ಞಾನ ತಂತ್ರಜ್ಞಾನ ಯೋಜನೆಗಳನ್ನು ಜನ ಸಾಮಾನ್ಯರ ದಿನ ನಿತ್ಯದ ಸಮಸ್ಯೆಗಳಿಗೆ ಪರಿಹಾರವಾಗಿ ರೂಪುಗೊಳ್ಳುವಂತೆ ಒತ್ತಾಯಿಸುವುದು ನಮ್ಮೆಲ್ಲರ ಕರ್ತವ್ಯ ಆಗಿದೆ ಹಾಗಾಗಿ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಗೌರವಾಧ್ಯಕ್ಷ ಜಿ .ಶ್ರೀನಿವಾಸ್ ಮಾತನಾಡಿ ಏμÁ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ನೊಬೆಲ್ ಪ್ರಶಸ್ತಿ ಪಡೆದ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ಅಕ್ಕಿಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ .ಅವರ ಜೀವನ ಆದರ್ಶಗಳ ಬಗ್ಗೆ ಪುಸ್ತಕಗಳ ಅಧ್ಯಯನ ಮಾಡಬೇಕು ಎಂದರು .
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಕೆ ಶ್ರೀನಿವಾಸ್ ಮಾತನಾಡಿ ಕರ್ನಾಟಕದಲ್ಲಿ ಜ್ಞಾನವಿಜ್ಞಾನ ಕ್ಷತ್ರದಲ್ಲಿ ಸಾಕಷ್ಟು ಸಂಸ್ಥೆಗಳಿದ್ದರೂ ವಿಜ್ಞಾನ ಕಾರ್ಯಕ್ರಮಗಳು ತಲುಪದೇ ಇರುವ ಗ್ರಾಮಗಳು ಇದೆ ಎಂದರೆ ಅತಿಶಯೋಕ್ತಿಯಲ್ಲ ಜೊತೆಗೆ ಕೇವಲ ಸರ್ಕಾರದ ನೆರವು ನಿರೀಕ್ಷಿಸಿ ಕೂರದೆ ಸಮುದಾಯದ ಸರ್ಕಾರದ ನೆರವಿನಿಂದಲೇ ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುವ ಸಂಸ್ಥೆಯು ಜನಸಾಮಾನ್ಯರ ಮುಟ್ಟುವಲ್ಲಿ ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯಿಸಿದರು .
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ನಡೆದ ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಈ ಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೀನಿಧಿ ರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು .
ಶಾಲಾ ಮುಖ್ಯೋಪಾಧ್ಯಾಯಿನಿ ಸರೋಜಾ .ಈ ಸಮಿತಿಯ ಜಿಲ್ಲಾ ಸಂಚಾಲಕ ಡಾ. ಶರಣಪ್ಪ ಗಬ್ಬೂರ್ ಸಹ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು
.