ಅಪಘಾತದಲ್ಲಿ8 ಮಂದಿ ಮೃತ್ಯು – ಟ್ರ್ಯಾಕ್ಟರ್ – ಬಸ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ 25 ಮಂದಿಗೆ ಗಾಯ

JANANUDI.COM NETWORK


ಹುಬ್ಬಳ್ಳಿ : ನಗರದ ಬೈಪಾಸ್ ಸಮೀಪ ಟ್ರ್ಯಾಕ್ಟರ್, ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.25 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ತಾರಿಹಾಳ ಬೈಪಾಸ್‍ನಲ್ಲಿ ಸಂಭವಿಸಿದ ಈ ಘಟನೆಯಲ್ಲಿ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಹಾಗೂ ದಾರಿ ಮಧ್ಯೆ ಎಂದು 8 ಮಂದಿ ಈ ಅಘಟನೆಯಲ್ಲಿ ಇಹ ತ್ಯಜಿಸಿದ್ದಾರೆ.
ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಬಸ್, ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿಯಾಯಿತು. ನಂತರ ಬಸ್ಸಿನ ಹಿಂದೆ ಬರುವಂತ ಲಾರಿ ಬಸ್ಸಿಗೆ ಡಿಕ್ಕಿಯಾಯಿತು, ಲಾರಿಯ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಮೃತಪಟ್ಟರು.
ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.
25 ಜನರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ವಾಹನಗಳನ್ನು ಪೆÇಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.ಈಬಸ್ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಘಟನೆ ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ಸಂಚಾರ ಠಾಣೆ ಪೆÇಲೀಸರು ಅಪಘಾತ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ