

ಚೆನ್ನೈ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಓಟ್ಟು ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಮರಳುತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದರೆ, ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ ಅಪಘಾತದ ತೀವ್ರತೆಗೆ ಎರಡೂ ವಾಹನಗಳು ತೀವ್ರ ಹಾನಿಗೊಳಗಾಗಿವೆ. ಇದರಿಂದಾಗಿ ವಾಹನಗಳು.
ಮಿತಿಮೀರಿದ ವೇಗದಲ್ಲಿ ಅಪಘಾತಕ್ಕೊಳಗಾಗಿವೆ ಎನ್ನಲಾಗುತ್ತದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.