ಶ್ರೀನಿವಾಸಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಸೇರಿದಂತೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಬಿ.ನಂದಿನಿ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಪಾಲನೆಯಲ್ಲಿ ಯಾವುದೇ ಲೋಪ ಕಂಡುಬಂದರೂ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಏ.13 ರಂದು ಗೆಜೆಟ್ ಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಏ.20, ನಾಮಪತ್ರಗಳ ಪರಿಶೀಲನೆ ಏ.21, ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕ ಏ.24, ಮತದಾನ ದಿನಾಂಕ ಮೇ.10, ಮತ ಎಣಿಕೆ ಏ.13, ಏ.15ಕ್ಕೆ ಮೊದಲು ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಸಿಬ್ಬಂದಿ ಶಿಲ್ಪ, ಭಾವನಾ ಇದ್ದರು.