

ಕುಂದಾಪುರ: ಜೂನ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ “ಹಸಿರೇ ಉಸಿರು; ಅರಿವೇ ಗುರು” ಪರಿಸರ ಮತ್ತು ನಮ್ಮ ಪ್ರಕೃತಿಯ ಬಗ್ಗೆ ಅರಿವು ಮೂಡಿಸುವ ಸಾಕ್ಷಾತ್ ನಿದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸಭೆಯನ್ನು ಉದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕುಂದಾಪುರ ಅರಣ್ಯ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜಾ ಎಂ.ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳ ನ್ನಾಡಿದರು. ಭೌತಶಾಸ್ತ್ರ ಉಪನ್ಯಾಸಕಿ ವಿದ್ಯಾ ಪರಿಸರ ಸಂರಕ್ಷಣೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ವಾಚಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಚೈತ್ರ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ವಿದ್ಯಾಧರ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಧರಣಿ, ಸನಾ, ನಿರೀಕ್ಷ ಪರಿಸರ ಗೀತೆಗೆ ಸ್ವರ ಸಂಯೋಜಿಸಿದರು.


