ಶ್ರೀನಿವಾಸಪುರ 1 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಗ್ರಾಮದ ಪ್ರತಿಯೊಂದು ಕುಟುಂಬದವರು ಹಾಗು ಗ್ರಾಮಸ್ಥರು ಬಳಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹೇಳಿದರು.
ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಬುಧವಾರ ಹಸ್ತಾಂತರಿಸಿದರು.
ತಾಲೂಕು ಯೋಜನಾಧಿಕಾರಿ ಎಸ್.ಸುರೇಶ್‍ಗೌಡ, ದೇವಸ್ಥಾನ ಕಮಿಟಿ ಅಧ್ಯಕ್ಷ ಎಂ.ಶ್ರೀನಿವಾಸಪ್ಪ, ಉಪಾಧ್ಯಕ್ಷ ಮುನಿರಾಜು, ಹಾಗೂ ಕಾರ್ಯದರ್ಶಿಗಳಾದ ಶಿವರಾಮಯ್ಯ, ನಂಬಿಹಳ್ಳಿ ವಲಯ ಮೇಲ್ವಿಚಾರಕ ಮೂರ್ತಿ ಸೇವಾಪ್ರತಿನಿಧಿ ಉಮಾ ಹಾಗೂ ಗ್ರಾಮಸ್ಥರು ಇದ್ದರು.
ಪೋಟು 1 : ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹಸ್ತಾಂತರಿಸಿದರು.