ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಪ್ರತಿಯೊಬ್ಬರೂ ಕಾನೂನು ಅರಿವು ಮೂಡಿಸುವಲ್ಲಿ ನ್ಯಾಯಾಂಗ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಬಿ.ವೀರಪ್ಪ ಹೇಳಿದರು.
ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ – ದೆಹಲಿ ತಾಲ್ಲೂಕು ಘಟಕ, ರಾಜ್ಯ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ವರಿಗೂ ಸಮ ಪಾಲು, ಸರ್ವರಿಗೂ ಸಮ ಬಾಳು ದೊರೆಯಬೇಕಾದರೆ ಯಾರೊಬ್ಬರೂ ನ್ಯಾಯದಿಂದ ವಂಚಿತರಾಗಬಾರದು ಎಂದು ಹೇಳಿದರು.
ಮನುಷ್ಯನ ಹುಟ್ಟಿನಿಂದ ಹಿಡಿದು ಸಾವಿನ ವರೆಗೆ ಜೀವನದಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸುತ್ತದೆ. ಹಳ್ಳಿಗಳ ದೇಶವಾದ ಭಾರತದಲ್ಲಿ ಶೇ.೨೦ ಮಂದಿಗೂ ಕಾನೂನು ಅರಿವು ಇಲ್ಲ. ಇದು ದುರದೃಷ್ಟಕರ ಬೆಳವಣಿಗೆ. ಆದ್ದರಿಂದಲೇ ನ್ಯಾಯಾಂಗದ ನಡೆ ಹಳ್ಳಿಯ ಕಡೆ ಸಾಗಿದೆ. ಕಾನೂನು ಅರಿವು ಮೂಡಿಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ. ಸಮಾಜದಲ್ಲಿನ ಅಶಕ್ತರಿಗೆ ಕಾನೂನು ನೆರವು ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಮಾತನಾಡಿ, ಜನರಲ್ಲಿ ಕಾನೂನು ಅರಿವು ಮೂಡಿದಾಗ ಮಾತ್ರ ನ್ಯಾಯಾಂಗ ವ್ಯವಸ್ಥೆಗೆ ಚೈತನ್ಯ ಬರುತ್ತದೆ. ವಕೀಲರು ಕಾನೂನು ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಜನರಿಗೆ ಬೇಗ ನ್ಯಾಯ ಸಿಗುವಂತಾಗಬೇಕು ಎಂದು ಹೇಳಿದರು.
ಜಿಲ್ಲಾ ನ್ಯಾಯಾಧೀಶ ಕೆ.ಆರ್.ನಾಗರಾಜ, ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟಿçÃಯ ಅಧ್ಯಕ್ಷ ಡಾ. ಮೋಹನ್ ರಾವ್ ನಲ್ವಾಡೆ, ವಕೀಲರ ಸಂಘದ ಅದ್ಯಕ್ಷ ಕೆ.ಶಿವಪ್ಪ ಕಾನೂನು ಅರಿವು ಕಾರ್ಯಕ್ರಮದ ಮಹತ್ವ ಕುರಿತು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಕ್ರಿಷ್ಣಪ್ಪ, ಡಾ. ಬಿ.ಟಿ.ಮಂಜು ನಾಯ್ಕ್ ಕ್ರಮವಾಗಿ ಮಹಿಳೆಯರಿಗೆ ಆಸ್ತಿ ಹಕ್ಕು ಹಾಗೂ ಮೂಲಭೂತ ಹಕ್ಕುಗಳ ಬಗ್ಗೆ ಮಾತನಾಡಿ ಕಾನೂನು ಅರಿವು ಮೂಡಿಸಿದರು.
ಸ್ಥಳೀಯ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜು, ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್, ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಡಿ .ವೈ.ಎಸ್.ಪಿ.ಗಿರಿ.ಪೋಲಿಸ್ ಸರ್ಕಲ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್, ಬಿಇಒ ವಿ.ಉಮಾದೇವಿ, ಲೋಕ ಉಪಯೋಗಿ ಎ.ಇ.ಇ.ಎಂ.ಕೆ.ಉಸೇನ್ ಸಾಬ್.ಕೃಷಿ ಇಲಾಖೆ ಸಹಾಯಕ ನಿರ್ದೇಶಕ .ಧನಂಜಯ್. ತೋಟಗಾರಿಕೆ. ಇಲಾಖೆ ಯ ಸಹಾಯಕ ನಿರ್ದೇಶಕ. ಎಂ.ಶ್ರೀನಿವಾಸನ್.ರೇಷ್ಮೆ ಇಲಾಖೆ ಯ ಸಹಾಯಕ. ನಿರ್ದೇಶಕ. ನಾಗರಾಜ್. ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ನAಜುAಡರೆಡ್ಡಿ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ಕುಬೇರಗೌಡ, ಉಪಾಧ್ಯಕ್ಷ ಎಸ್.ರವಿಕುಮಾರ್, ಖಜಾಂಚಿ ಎಸ್.ನಾಗೇಂದ್ರ ಬಾಬು, ಬಿ.ಎನ್.ವಿನಯ್ ಕುಮಾರ್, ಎಂ.ವಿ.ರಾಮಚAದ್ರಪ್ಪ ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ.ಕಾರ್ಯದರ್ಶಿ ಕೆ.ವಿ.ರೂಪ ವಕೀಲ ರಾದ.ಟಿ.ವೆಂಕಟೇಶ್.ಜಯರಾಮೇಗೌಡ. ಅರ್ಜುನ್.ವಿನಯ್ ಕುಮಾರ್. ಎಂ.ಸಿ.ಶಿವಶಂಕರ್. ಮುರಳಿ.ಕೃಷ್ಣಪ್ಪ.ಶ್ರೀನಿವಾಸ್ ಗೌಡ.ರಾಧಾಕೃಷ್ಣ.ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ