

ಚೆನೈ; ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರಿಗೆ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಜಯಪ್ರದಾ ನಡೆಸುತ್ತಿದ್ದ ಚಿತ್ರಮಂದಿರದಲ್ಲಿ ಕೆಲಸ ಮಾಡುತಿದ್ದ ಕಾರ್ಮಿಕರಿಗೆ ಇಎಸ್ಐ ಹಣ ಪಾವತಿಸಿಲ್ಲ ವೆಂಬ ಪ್ರಕರಣಾಕ್ಕಾಗಿ ನ್ಯಾಯಲಯ ಈ ಶಿಕ್ಷೆಯನ್ನು ಅವರಿಗೆ ವಿಧಿಸಿದೆ. ಕಾರ್ಮಿಕರು ಇಎಸ್ಐ ಹಣ ಪಾವತಿಸಿಲ್ಲವೆಂದು ತಮಿಳ್ನಾಡು ರಾಜ್ಯ ವಿಮಾ ನಿಗಮಕ್ಕೆ ದೂರು.
ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಚೆನ್ನೈ ಎಗ್ಟೋರ್ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಕಾರ್ಮಿಕರಿಗೆ ನೀಡಬೇಕಾದ ಮೊತ್ತವನ್ನು ನೀಡುವುದಾಗಿ ಜಯಪ್ರದಾ ತಿಳಿಸಿದ್ದರೂ, ಕಾರ್ಮಿಕ ಸರ್ಕಾರಿ ವಿಮಾ ನಿಗಮದ ಪಕೀಲರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ
ಶಿಕ್ಷೆ ವಿಧಿಸಲಾಗಿದೆ.