ನೀರಾವರಿಯನ್ನು ಬಳಸಿಕೊಳ್ಳಲು ಇಚ್ಛೆಯುಳ್ಳ ರೈತರು ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಬೇಕು

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ನೀರಾವರಿಯನ್ನು ಬಳಸಿಕೊಳ್ಳಲು ಇಚ್ಛೆಯುಳ್ಳ ರೈತರು ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಬೇಕು . ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪಾಲಿಹೌಸ್ ನಿರ್ಮಾಣ ಮಾಡುವ ರೈತರಿಗೆ ಶೇಕಡ 50 ರಷ್ಟು ಸಮುದಾಯ ಕೃಷಿ ಹೊಂಡಗಳಿಗೆ 4 ಲಕ್ಷ ಮತ್ತು ಸಣ್ಣ ಕೃಷಿ ಹೊಂಡಗಳಿಗೆ 70 ಸಾವಿರ ಸಹಾಯಧನ ನೀಡಲಾಗುತ್ತದೆ . ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ಯಾವುದೇ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಮಾವು , ಸೀಬೆ , ಸಪೋಟ ಹಾಗೂ ಡ್ರಾಗನ್ ಫ್ರಟ್ ಬೆಳೆಯುವುದಕ್ಕೆ ಇಲಾಖೆ ವತಿಯಿಂದ ಸಹಾಯಧನ ನೀಡಲಾಗುವುದು . ಲಕ್ಕೂರು ಹೋಬಳಿಯಲ್ಲಿ ಹೆಚ್ಚಾಗಿ ರೈತರು ಗುಲಾಬಿ ಹೂವನ್ನು ಬೆಳೆಯುತ್ತಿದ್ದಾರೆ ಎಂದು ಅವರು ತಿಳಿಸಿದರು . ಕಾರ್ಯಕ್ರಮದಲ್ಲಿ ಸಹಾಯಕ ಉಪವಿಭಾಗಾಧಿಕಾರಿ ಆನಂದ್ ಪ್ರಕಾಶ್ ಮೀನಾ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ || ಜಗದೀಶ್ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ , ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರೂಪದೇವಿ , ಮಾಲೂರು ತಹಶೀಲ್ದಾರ್ ಕೆ.ರಮೇಶ್ , ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕೇಶ್ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .