

ಕುಂದಾಪುರ ತುಳಸಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವೇದಮೂರ್ತಿ ವಿದ್ವಾನ್ ಮಂಜುನಾಥ್ ಭಟ್ಟರು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಸಿ .ಎ ಕೃಷ್ಣರಾಯ್ ಶ್ಯಾನಭಾಗ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿಯಾಗಿರುವ ಶ್ರೀಮತಿ ರೇಷ್ಮಾ ಪ್ರದೀಪ್ ಉಪಸ್ಥಿತರಿದ್ದರು. ಗಣ್ಯರು ದೀಪ ಬೆಳಗಿಸಿ ಶ್ರೀ ಕೃಷ್ಣನಿಗೆ ಪುಷ್ಪಾರ್ಚನೆ ಸಲ್ಲಿಸಿ, ತೊಟ್ಟಿಲು ತೂಗುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು. ವಿದ್ಯಾರ್ಥಿಗಳಿಂದ ಭಜನೆ ನಡೆಯಿತು. ಮುಖ್ಯ ಅತಿಥಿಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹತ್ವ ಕುರಿತು ಮಾತನಾಡಿದರು.
ಪ್ರೀ ಕೆ.ಜಿ ಯಿಂದ ಎರಡನೇ ತರಗತಿಯವರೆಗಿನ ಪುಟಾಣಿ ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಧರಿಸಿ ಎಲ್ಲರದ ಗಮನ ಸೆಳೆದರು. ವೇಷಧಾರಿ ಮಕ್ಕಳಿಗೆ ಮುಖ್ಯ ಅತಿಥಿಗಳು, ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಮುಖ್ಯೋಪಾಧ್ಯಾಯನಿಯವರು ನೆನಪಿನ ಕಾಣಿಕೆಯನ್ನು ವಿತರಿಸಿದರು. ಮುಖ್ಯ ಅತಿಥಿ ವೇದಮೂರ್ತಿ ವಿದ್ವಾನ್ ಮಂಜುನಾಥ್ ಅವರನ್ನು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾದ ಸಿ .ಎ ಕೃಷ್ಣರಾಯ್ ಶಾನ್ ಭಾಗ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು.
ನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನೃತ್ಯ, ಶ್ಲೋಕ ,ಕೊಳಲು ವಾದನ ಹಾಗೂ ಭಜನೆಗಳ ಮೂಲಕ ಮನರಂಜಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಮಾನ್ವಿ ಆಚಾರ್ ಹಾಗೂ ಮನಸ್ವಿ ಇವರು ನಿರ್ವಹಿಸಿದರು. ಏಳನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಸ್ವಾಗತಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಅನ್ವಿತ ಇವರು ಧನ್ಯವಾದವನ್ನು ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದರು. ಪೋಷಕರ ಸಹಭಾಗಿತ್ವದಿಂದ ಕಾರ್ಯಕ್ರಮ ಮತ್ತಷ್ಟು ಕಳೆಗಟ್ಟಿತು. ಭಕ್ತಿ ಸಂಭ್ರಮ ಹಾಗೂ ಮಕ್ಕಳ ಪ್ರತಿಭೆಯ ಅನಾವರಣದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಯಶಸ್ವಿಯಾಗಿ ನೆರವೇರಿತು.

