

ಸೆ 12 ರಂದು ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಸಹಯೋಗದಲ್ಲಿ ನಡೆದಂತಹ ತಾಲ್ಲೂಕು ಮಟ್ಟದ 14/17ರ ವಯೋಮಿತಿಯೊಳಗಿನ ಬಾಲಕ- ಬಾಲಕಿಯರ ವಿಭಾಗದ ನೆಟ್ ಬಾಲ್ ಪಂದ್ಯಾಟದಲ್ಲಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಎರಡು ವಿಭಾಗದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೆಯೇ 14ರ ವಯೋಮಿತಿ ಯೊಳಗಿನ ಬಾಲಕಿಯರ ವಿಭಾಗದ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಈ ಎಲ್ಲಾ ಕ್ರೀಡಾ ಸಾಧಕರನ್ನು ಶಾಲೆಯ ಆಡಳಿತ ಮಂಡಳಿ,ಮುಖ್ಯ ಶಿಕ್ಷಕಿ ಧರ್ಮಭಗಿನಿ ವಿಜಯ ಕ್ರಾಸ್ತ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು , ಪೋಷಕರು, ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.




