ಕರ್ನಾಟಕದಲ್ಲಿ ಮುಂದಿನ ಐದು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ರಾಜ್ಯದ ಹವಾಮಾನ ಇಲಾಖೆ ಇಂದು ಹೊಸ ಮುನ್ಸೂಚನೆ ನೀಡಿದೆ. ಅದರಂತೆ ಮುಂದಿನ ಐದು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಚಂಡಮಾರುತದಿಂದ ಮುಂಗಾರು ದುರ್ಬಲಗೊಂಡಿತ್ತು. ಇದೀಗ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಂಡಮಾರುತ ದುರ್ಬಲವಾಗಿ, ಮುಂಗಾರು ಚುರುಕುಗೊಳ್ಳುತ್ತಿದೆ. ಹೀಗಾಗಿ, ಭಾನುವಾರ ರಾಜಧಾನಿ ಬೆಂಗಳೂರು, ಮಂಗಳೂರು, ಹೊನ್ನಾವರದಲ್ಲಿ ಮಳೆಯಾಗಿದ್ದು. ಇನ್ನು, ರಾಜ್ಯದ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆಯೆಂದು ತಿಳಿಸಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆಯೆಂದು ಕೂಡ ತಿಳಿಸಿದ್ದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನು ಹೊರತುಪಡಿಸಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಉತ್ತರಕನ್ನಡ ಭಾಗದ ಕೆಲ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.