

ಆಂಧ್ರಪ್ರದೇಶ: ತಿರುಪತಿ ಯಾತ್ರೆ ಮುಗಿಸಿ ಹಿಂದಿರುಗುವ ವೇಳೆ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕದ ಐವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ. ಮಠಂಪಲ್ಲಿಯಲ್ಲಿ ನಡೆದಿದೆ. ಅಪಘಾತಕೊಳ್ಳಗಾದವರನ್ನು ಬೆಳಗಾವಿ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದ ವೇಳೆ
ಮಠಂಪಲ್ಲಿ ಗ್ರಾಮದ ಬಳಿ ತಮ್ಮ ಕ್ರೂಸರ್ ವಾಹನ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.