ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಜನಪದ ಕಲೆ ಹಾಗೂ ಸಾಹಿತ್ಯ ಆಧುನಿಕ ಕಲೆ ಹಾಗೂ ಸಾಹಿತ್ಯದ ತಾಯಿ ಬೇರು ಎಂಬುದನ್ನು ಅರಿಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಹೇಳಿದರು.
ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದ ಏಕಲವ್ಯ ವಸತಿ ಶಾಲೆ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗಿರಿಜನ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಸಮುದಾಯದ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಗುಣಾತ್ಮಕ ಫಲಿತಾಂಶ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಮಾತನಾಡಿ, ತಳ ಸಮುದಾಯಗಳ ಕಲೆ ಹಾಗೂ ಸಂಸ್ಕøತಿಯನ್ನು ಉಳಿಸುವಲ್ಲಿ ಗಿರಿಜನ ಉತ್ಸವದಂಥ ಕಾರ್ಯಕಾರ್ಯಕ್ರಮಗಳು ನೆರವಾಗುತ್ತವೆ. ಇಂಥ ಉತ್ಸವದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿ, ವಿದ್ಯಾರ್ಥಿಗಳು ಅನಗತ್ಯವಾಗಿ ಮೊಬೈಲ್ ಬಳಸುವುದನ್ನು ಬಿಡಬೇಕು. ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಜತೆಗೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಮುಖಂಡರಾದ ಡಿ.ಎಂ.ರವಿಕುಮಾರ್, ನಾರಾಯಣಸ್ವಾಮಿ, ನಾಗರಾಜ್, ಚಂದ್ರಪ್ಪ, ಶ್ರೀನಿವಾಸ್, ಡಿ.ಆರ್.ರಾಜಪ್ಪ, ರಾಮಾಂಜನೇಯರೆಡ್ಡಿ ಇದ್ದರು.