

ಕೋಲಾರ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶವನ್ನು ದೇವನಹಳ್ಳಿಯಲ್ಲಿ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ಇಡೀ ಸಂಪುಟದಲ್ಲೇ ಉತ್ತಮ ಸಾಧನೆ ತೋರಿರುವ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ದೇವನಹಳ್ಳಿಯಲ್ಲಿ ನಡೆದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶದಲ್ಲಿ ರಾಜ್ಯ ಸಂಪುಟದ 36 ಸಚಿವರಲ್ಲಿ ಉತ್ತಮ ಸಾಧನೆ ತೋರಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಕೆ.ಎಚ್.ಮುನಿಯಪ್ಪರನ್ನು ಸನ್ಮಾನಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಯಾಗಿ ಜಿಲ್ಲೆಯ ಎಲ್ಲಾ ಶಾಸಕರನ್ನು ಸಮನ್ವಯತೆಯಿಂದ ನಡೆಸಿಕೊಂಡಿರುವ ಸಚಿವ ಮುನಿಯಪ್ಪ ತಮ್ಮ ಖಾತೆಯಲ್ಲೂ ಉತ್ತಮ ಕಾರ್ಯನಿರ್ವಹಣೆ ಮಾಡಿದ್ದಾರೆ ಎಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಸಚಿವ ಜಮೀರ್ ಅಹಮದ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಸಕರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಕಾಂಗ್ರೆಸ್ನಿಂಎ ಮುಖಂಡರಾದ ಎಲ್.ಎ.ಮಂಜುನಾಥ್, ಎಸ್ಸಿಘಟಕದ ಅಧ್ಯಕ್ಷ ಕೆ.ಜಯದೇವ್, ಮುಖಂಡರಾದ ಪ್ರಸಾದ್ಬಾಬು, ಊರುಬಾಗಿಲು ಶ್ರೀನಿವಾಸ್, ನಾಗರಾಜ್, ಮಂಜುನಾಥ್, ಪ್ಯಾರೇಜಾನ್ ಮತ್ತಿತರರು ಹಾಜರಿದ್ದರು.
(ಚಿತ್ರಶೀರ್ಷಿಕೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಸಮಾವೇಶವನ್ನು ದೇವನಹಳ್ಳಿಯಲ್ಲಿ ನಡೆಸಲಾಗಿದ್ದು,ಈ ಸಂದರ್ಭದಲ್ಲಿ ಇಡೀ ಸಂಪುಟದಲ್ಲೇ ಉತ್ತಮ ಸಾಧನೆ ತೋರಿರುವ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.)