ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಕೋಲಾರ : ಸರ್ಕಾರದ ವಿವಿಧ ಯೋಜನೆಗಳ ಮೂಲಕ ಅರ್ಹ ಅಲ್ಪಸಂಖ್ಯಾತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು . ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನ್ಯ ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು . ಪೂರ್ಣ ಪ್ರಮಾಣದಲ್ಲಿ ಅಲ್ಪಸಂಖ್ಯಾತರಿಗೆ ಸೌಲಭ್ಯಗಳನ್ನು ಒದಗಿಸಬೇಕು . ನಮ್ಮಲ್ಲಿ 4 ಮೌಲಾನಾ ಶಾಲೆಗಳಿವೆ . ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿದೆ ಅವರ ಜನಸಂಖ್ಯೆಗೆ ತಕ್ಕಂತೆ ಸರ್ಕಾರಿ ಸವಲತ್ತುಗಳನ್ನು ಒದಗಿಸಬೇಕು . ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು . ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹದೇವಕೆ ಅವರು ಮಾತನಾಡಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟು 1999-2000 ನೇ ಸಾಲಿನಿಂದ ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸುತ್ತಿದೆ . ಜಿಲ್ಲಾ ಮಟ್ಟದಲ್ಲಿ ಕಚೇರಿ ಹಾಗೂ ತಾಲ್ಲೂಕುಗಳಲ್ಲಿ ಪ್ರತ್ಯೇಕವಾದ ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವುದರ ಮೂಲಕ ಅಲ್ಪಸಂಖ್ಯಾತರ ಸಮುದಾಯದವರಿಗೆ ಭಾರತ ಸಂವಿಧಾನದ ಅನುಚ್ಛೇದ 15 ( 4 ) ರಡಿ ಯಲ್ಲಿ ಶೈಕ್ಷಣಿಕ ಹಾಗೂ 16 ( 4 ) ರಡಿಯಲ್ಲಿ ಔದ್ಯೋಗಿಕ ಮೀಸಲಾತಿ ಸೌಲಭ್ಯಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ . ಜಿಲ್ಲೆಯಲ್ಲಿ ಈಗಾಗಲೇ ಇರುವ 29 ಮುರಾರ್ಜಿ ಅರ್ಹ ವಿದ್ಯಾರ್ಥಿಗಳಿಗೆ ದೇಸಾಯಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು . ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ . ಜಿಲ್ಲೆಯಲ್ಲಿ ಆರು ವಿದ್ಯಾರ್ಥಿನಿಲಯಗಳಿದ್ದು , ಅದರಲ್ಲಿ ಮೂರು ಕಟ್ಟಡಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ . ಉಳಿದ ಮೂರು ಕಟ್ಟಡಗಳು ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಆ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದ ಸ್ಥಳದಲ್ಲಿ ಮೂಲಭೂತ ಸೌಲಭ್ಯಗಳ ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು . 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೂ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ 21,885 ಮಂದಿ ಅಲ್ಪಸಂಖ್ಯಾತರ ಸಮುದಾಯದವರು ಅನುಕೂಲ ಪಡೆಯುತ್ತಿರುತ್ತಾರೆ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯಡಿ 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೆ 90 ಮಂದಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಅರ್ಜಿಗಳಿಗೆ ಆನ್‌ಲೈನ್‌ಯಲ್ಲಿ ಮಂಜೂರಾತಿಯನ್ನು ನೀಡಲಾಗಿದೆ . ಜಿಲ್ಲೆಯಲ್ಲಿ 44,669 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿದ್ದಾರೆ ಹಾಗೂ ಒಟ್ಟು 167 ಉರ್ದು ಶಾಲೆಗಳಿಗೆ 2021-22 ನೇ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ನವೀಕೃತ ಅರ್ಜಿಗಳು ಸೈರಿದಂತೆ ಒಟ್ಟಾರೆ 26,204 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದರು . ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಮತ್ತು ತಾಲ್ಲೂಕು ಮಟದ ಅಧಿಕಾರಿಗಳು ಸೇರಿದಂತೆ ಮತಿತರರು ಉಪಸಿತರಿದರು .